*_ರಾಜ್ಯದ ಜನತೆಯ ಹಿತದೃಷ್ಠಿಯಿಂದ ರಾಜ್ಯ ಸರ್ಕಾರವು 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆ.–ಎ.ಬಿ.ಕುಮಾರ್_*

ಕೃಷ್ಣರಾಜಪೇಟೆ:ರಾಜ್ಯದ ಜನತೆಯ ಹಿತದೃಷ್ಠಿಯಿಂದ ರಾಜ್ಯ ಸರ್ಕಾರವು 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆ. ನಮ್ಮ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಈ ಯೋಜನೆಗಳು ರಾಜ್ಯದ ಸುಮಾರು 7 ಕೋಟಿ ಜನತೆಗೆ ಒಂದಲ್ಲ ಒಂದು ರೂಪದಲ್ಲಿ ಅನುಕೂಲವಾಗಿದೆ ಎಂದು ಅಗ್ರಹಾರಬಾಚಹಳ್ಳಿ ಎ.ಬಿ.ಕುಮಾರ್ ಹೇಳಿದರು

ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ತಿಂಗಳಿಗೆ ಎರಡು ಭಾರಿ ಗ್ಯಾರಂಟಿ ಯೋಜನಾ ಸಮಿತಯ ಸಭೆ ನಡೆಸಿ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷಿ, ಗೃಹಜ್ಯೋತಿ, ಅನ್ನಭಾಗ್ಯ, ಯುವನಿಧಿ ಹಾಗೂ ಶಕ್ತಿ ಯೋಜನೆಗಳ ಅನುಷ್ಠಾನದ ಬಗ್ಗೆ ಗಮನ ಹರಿಸಬೇಕಾಗಿದೆ ಎಂದರು. ತಾಲ್ಲೂಕಿನ ಹಲವಾರು ಮಂದಿಗೆ ಗೃಹಲಕ್ಷಿ ಹಣವು ಡಿಬಿಟಿ ಮೂಲಕ ಸರಿಯಾಗಿ ಪಾವತಿಯಾಗುತ್ತಿಲ್ಲ ಎಂಬ ದೂರು ಇದೆ ಇದನ್ನು ಸರಿಪಡಿಸಬೇಕು. ಮನೆಯ ಯಜಮಾನತಿಯಾಗಿದ್ದವರು ಸಾಕಷ್ಟು ಮಂದಿ ಮೃತರಾಗಿದ್ದು ಅಂತಹ ಕುಟುಂಬದ ಹೆಣ್ಣು ಮಗಳಿಗೆ ಗೃಹಲಕ್ಷಿ ಹಣವು ಸಿಗುವಂತೆ ಸೂಕ್ತ ಕ್ರಮ ವಹಿಸಬೇಕು ಎಂದು ಗ್ಯಾರಂಟಿ ಸಮಿತಿ ಅಧ್ಯಕ್ಷರು ತಾಲ್ಲೂಕು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿ ಪದ್ಮಮ್ಮ ಅವರಿಗೆ ಸಲಹೆ ನೀಡಿದರು._

_ಗ್ಯಾರಂಟಿ ಸಮಿತಿ ಕಾರ್ಯದರ್ಶಿ ತಾಲ್ಲೂಕು ಪಂಚಾಯಿತಿ ಇಓ ಸುಷ್ಮ ಅವರು ಮಾತನಾಡಿ ತಾಲ್ಲೂಕಿನಲ್ಲಿ ಅಪ್ರಾಪ್ತ ವಯಸ್ಸಿನ ಹೆಣ್ಣು ಮಕ್ಕಳನ್ನು ಪೋಷಕರು ವಿವಾಹ ಮಾಡುತ್ತಿರುವ ಬಗ್ಗೆ ಸಾಕಷ್ಟು ದೂರುಗಳಿವೆ. ಇದನ್ನು ತಡೆಗಟ್ಟಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು ಸೂಕ್ತ ಕ್ರಮ ವಹಿಸಬೇಕು ಈ ಮೂಲಕ ಬಾಲ್ಯ ವಿವಾಹವನ್ನು ತಪ್ಪಿಸಬೇಕು. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಬಾಲ್ಯ ವಿವಾಹ ಕುರಿತು ಕಾರ್ಯಾಗಾರ ಹಮ್ಮಿಕೊಂಡು ಪೋಷಕರಲ್ಲಿ ಜಾಗೃತಿ ಮೂಡಿಸಬೇಕು ಎಂದು ಸಲಹೆ ನೀಡಿದರು._

_ತಾಲ್ಲೂಕಿನ ಅಗ್ರಹಾರಬಾಚಹಳ್ಳಿ ಗ್ರಾಮಕ್ಕೆ ಬೆಳಗ್ಗೆ 8ಗಂಟೆಗೆ ಬಸ್ ಹೋಗಿ ಬರುತ್ತಿದೆ. ಇದರ ವೇಳೆಯನ್ನು 9ಗಂಟೆಗೆ ನಿಗದಿಪಡಿಸಿದರೆ, ಶಾಲಾ-ಕಾಲೇಜು ವಿದ್ಯಾರ್ಥಿಗಳು ಅನುಕೂಲವಾಗಲಿದೆ. ವೇಳೆ ಬದಲಾವಣೆ ಮಾಡಿದರೆ ಸದರಿ ಮಾರ್ಗದಲ್ಲಿ ಬರುತ್ತಿರುವ ಆಧಾಯ ಇನ್ನೂ ಹೆಚ್ಚಾಗಲಿದೆ ಎಂದು ಎ.ಬಿ.ಕುಮಾರ್ ಡಿಪೋ ಅಧಿಕಾರಿಗಳಿಗೆ ಸೂಚನೆ ನೀಡಿದರು._

_ಕೃಷ್ಣರಾಜಪೇಟೆ ಯಿಂದ ತಿರುಪತಿ ಹೋಗುತ್ತಿದ್ದ ನೇರ ಬಸ್ಸನ್ನು ನಿಲ್ಲಿಸಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಕೇಳಿ ಬರುತ್ತಿದ್ದು, ಪುನರ್ ಆರಂಭಿಸುವAತೆ ಕೇಳುತ್ತಿದ್ದಾರೆ ಬಸ್ ಅನ್ನು ಏಕೆ ನಿಲ್ಲಿಸಲಾಗಿದೆ ಎಂದು ಡಿಪೋ ಮ್ಯಾನೇಜರ್ ಉಮಾಮಹೇಶ್ವರಿ ಅವರನ್ನು ಗ್ಯಾರಂಟಿ ಸಮಿತಿ ಅಧ್ಯಕ್ಷ ಎ.ಬಿ.ಕುಮಾರ್ ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಉಮಾಮಹೇಶ್ವರಿ ಕೆ.ಆರ್.ಪೇಟೆಯಿಂದ ತಿರುಪತಿಗೆ ಕಳೆದ ಐದಾರು ವರ್ಷಗಳಿಂದ ನಮ್ಮ ಡಿಪೋದಿಂದ ಬಸ್ ವ್ಯವಸ್ಥೆ ಮಾಡಲಾಗಿತ್ತು. ಆದರೆ ಸದರಿ ಮಾರ್ಗದಲ್ಲಿ ಶಕ್ತಿ ಯೋಜನೆ ಆರಂಭವಾದ ನಂತರ ನಷ್ಟ ಉಂಟಾಗುತ್ತಿದ್ದ ಹಿನ್ನೆಲೆಯಲ್ಲಿ ಕಳೆದ 1ತಿಂಗಳಿನಿAದ ಸದರಿ ಮಾರ್ಗವನ್ನು ಬಂದ್ ಮಾಡಲಾಗಿದೆ. ಅದೇ ಸಮಯಕ್ಕೆ ಬೆಂಗಳೂರಿನವರೆಗೆ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಅಲ್ಲಿಂದ ತಿರುಪತಿಗೆ ಸಾಕಷ್ಟು ಬಸ್ ವ್ಯವಸ್ಥೆ ಇದ್ದು ಪ್ರಯಾಣಿಕರಿಗೆ ಮಾರ್ಗ ರದ್ದತಿಯಿಂದ ತೊಂದರೆಯಾಗಿಲ್ಲ ಎಂದು ಸಭೆಗೆ ಮಾಹಿತಿ ನೀಡಿದರು,_

_ಇದೆ ಸಂದರ್ಭದಲ್ಲಿ ಚೆಸ್ಕಾಂ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಪುಟ್ಟಸ್ವಾಮಿ, ತಾಲ್ಲೂಕು ಆಹಾರ ಇಲಾಖೆಯ ಅಧಿಕಾರಿ ವಿನೋದ್, ಜಿಲ್ಲಾ ಉದ್ಯೋಗಾಧಿಕಾರಿ ಕುಸುಮ, ತಮ್ಮ ತಮ್ಮ ಇಲಾಖೆಯ ಪ್ರಗತಿಯ ವರದಿಯನ್ನು ಸಭೆಯಲ್ಲಿ ಮಂಡಿಸಿದರು._

_ಇದೆ ಸಂದರ್ಭದಲ್ಲಿ ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ತಾಲೂಕು ಪಂಚಾಯಿತಿ ಇಒ ಕೆ.ಸುಷ್ಮ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯರಾದ ಸಿ.ಆರ್.ಪಿ.ಕುಮಾರ್, ಬೂಕನಕೆರೆ ರೂಪಾ ಚಂದ್ರಶೇಖರ್, ಬೊಮ್ಮೇನಹಳ್ಳಿ ಲತಾ, ಕನಕದಾಸನಗರ ಶಿವಮ್ಮ, ಕೆ.ಎಸ್.ಆರ್.ಟಿ.ಸಿ ಶಿವಣ್ಣ, ಸಿಂಗನಹಳ್ಳಿ ಗೋಪಾಲ್, ಬಂಡಿಹೊಳೆ ಯೋಗೇಶ್(ಉಮೇಶ್), ಗೋವಿಂದನಹಳ್ಳಿ ಶ್ಯಾಮಣ್ಣ, ಬೂಕನಕೆರೆ ಬಿ.ಸಿ ಮಾಧು, ದೊಡ್ಡತಾರಹಳ್ಳಿ ಸೋಮಶೇಖರ್, ಹಾಫೀಜ್ ಉಲ್ಲಾ, ಯಗಚಗುಪ್ಪೆ ಶಿವಲಿಂಗಪ್ಪ, ಗ್ಯಾರಂಟಿ ವಿಷಯ ನಿರ್ವಾಹಕಿ ಚೈತ್ರ ಇತರರು ಉಪಸ್ಥಿತರಿದ್ದರು._

*_ವರದಿ: ಸಾಯಿಕುಮಾರ್. ಎನ್‌. ಕೆ._*_ರಾಜ್ಯದ ಜನತೆಯ ಹಿತದೃಷ್ಠಿಯಿಂದ ರಾಜ್ಯ ಸರ್ಕಾರವು 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆ. ನಮ್ಮ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಈ ಯೋಜನೆಗಳು ರಾಜ್ಯದ ಸುಮಾರು 7 ಕೋಟಿ ಜನತೆಗೆ ಒಂದಲ್ಲ ಒಂದು ರೂಪದಲ್ಲಿ ಅನುಕೂಲವಾಗಿದೆ ಎಂದು ಅಗ್ರಹಾರಬಾಚಹಳ್ಳಿ ಎ.ಬಿ.ಕುಮಾರ್ ಹೇಳಿದರು._*

ಕೃಷ್ಣರಾಜಪೇಟೆ:ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ತಿಂಗಳಿಗೆ ಎರಡು ಭಾರಿ ಗ್ಯಾರಂಟಿ ಯೋಜನಾ ಸಮಿತಯ ಸಭೆ ನಡೆಸಿ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷಿ, ಗೃಹಜ್ಯೋತಿ, ಅನ್ನಭಾಗ್ಯ, ಯುವನಿಧಿ ಹಾಗೂ ಶಕ್ತಿ ಯೋಜನೆಗಳ ಅನುಷ್ಠಾನದ ಬಗ್ಗೆ ಗಮನ ಹರಿಸಬೇಕಾಗಿದೆ ಎಂದರು. ತಾಲ್ಲೂಕಿನ ಹಲವಾರು ಮಂದಿಗೆ ಗೃಹಲಕ್ಷಿ ಹಣವು ಡಿಬಿಟಿ ಮೂಲಕ ಸರಿಯಾಗಿ ಪಾವತಿಯಾಗುತ್ತಿಲ್ಲ ಎಂಬ ದೂರು ಇದೆ ಇದನ್ನು ಸರಿಪಡಿಸಬೇಕು. ಮನೆಯ ಯಜಮಾನತಿಯಾಗಿದ್ದವರು ಸಾಕಷ್ಟು ಮಂದಿ ಮೃತರಾಗಿದ್ದು ಅಂತಹ ಕುಟುಂಬದ ಹೆಣ್ಣು ಮಗಳಿಗೆ ಗೃಹಲಕ್ಷಿ ಹಣವು ಸಿಗುವಂತೆ ಸೂಕ್ತ ಕ್ರಮ ವಹಿಸಬೇಕು ಎಂದು ಗ್ಯಾರಂಟಿ ಸಮಿತಿ ಅಧ್ಯಕ್ಷರು ತಾಲ್ಲೂಕು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿ ಪದ್ಮಮ್ಮ ಅವರಿಗೆ ಸಲಹೆ ನೀಡಿದರು._

_ಗ್ಯಾರಂಟಿ ಸಮಿತಿ ಕಾರ್ಯದರ್ಶಿ ತಾಲ್ಲೂಕು ಪಂಚಾಯಿತಿ ಇಓ ಸುಷ್ಮ ಅವರು ಮಾತನಾಡಿ ತಾಲ್ಲೂಕಿನಲ್ಲಿ ಅಪ್ರಾಪ್ತ ವಯಸ್ಸಿನ ಹೆಣ್ಣು ಮಕ್ಕಳನ್ನು ಪೋಷಕರು ವಿವಾಹ ಮಾಡುತ್ತಿರುವ ಬಗ್ಗೆ ಸಾಕಷ್ಟು ದೂರುಗಳಿವೆ. ಇದನ್ನು ತಡೆಗಟ್ಟಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು ಸೂಕ್ತ ಕ್ರಮ ವಹಿಸಬೇಕು ಈ ಮೂಲಕ ಬಾಲ್ಯ ವಿವಾಹವನ್ನು ತಪ್ಪಿಸಬೇಕು. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಬಾಲ್ಯ ವಿವಾಹ ಕುರಿತು ಕಾರ್ಯಾಗಾರ ಹಮ್ಮಿಕೊಂಡು ಪೋಷಕರಲ್ಲಿ ಜಾಗೃತಿ ಮೂಡಿಸಬೇಕು ಎಂದು ಸಲಹೆ ನೀಡಿದರು._

_ತಾಲ್ಲೂಕಿನ ಅಗ್ರಹಾರಬಾಚಹಳ್ಳಿ ಗ್ರಾಮಕ್ಕೆ ಬೆಳಗ್ಗೆ 8ಗಂಟೆಗೆ ಬಸ್ ಹೋಗಿ ಬರುತ್ತಿದೆ. ಇದರ ವೇಳೆಯನ್ನು 9ಗಂಟೆಗೆ ನಿಗದಿಪಡಿಸಿದರೆ, ಶಾಲಾ-ಕಾಲೇಜು ವಿದ್ಯಾರ್ಥಿಗಳು ಅನುಕೂಲವಾಗಲಿದೆ. ವೇಳೆ ಬದಲಾವಣೆ ಮಾಡಿದರೆ ಸದರಿ ಮಾರ್ಗದಲ್ಲಿ ಬರುತ್ತಿರುವ ಆಧಾಯ ಇನ್ನೂ ಹೆಚ್ಚಾಗಲಿದೆ ಎಂದು ಎ.ಬಿ.ಕುಮಾರ್ ಡಿಪೋ ಅಧಿಕಾರಿಗಳಿಗೆ ಸೂಚನೆ ನೀಡಿದರು._

_ಕೃಷ್ಣರಾಜಪೇಟೆ ಯಿಂದ ತಿರುಪತಿ ಹೋಗುತ್ತಿದ್ದ ನೇರ ಬಸ್ಸನ್ನು ನಿಲ್ಲಿಸಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಕೇಳಿ ಬರುತ್ತಿದ್ದು, ಪುನರ್ ಆರಂಭಿಸುವAತೆ ಕೇಳುತ್ತಿದ್ದಾರೆ ಬಸ್ ಅನ್ನು ಏಕೆ ನಿಲ್ಲಿಸಲಾಗಿದೆ ಎಂದು ಡಿಪೋ ಮ್ಯಾನೇಜರ್ ಉಮಾಮಹೇಶ್ವರಿ ಅವರನ್ನು ಗ್ಯಾರಂಟಿ ಸಮಿತಿ ಅಧ್ಯಕ್ಷ ಎ.ಬಿ.ಕುಮಾರ್ ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಉಮಾಮಹೇಶ್ವರಿ ಕೆ.ಆರ್.ಪೇಟೆಯಿಂದ ತಿರುಪತಿಗೆ ಕಳೆದ ಐದಾರು ವರ್ಷಗಳಿಂದ ನಮ್ಮ ಡಿಪೋದಿಂದ ಬಸ್ ವ್ಯವಸ್ಥೆ ಮಾಡಲಾಗಿತ್ತು. ಆದರೆ ಸದರಿ ಮಾರ್ಗದಲ್ಲಿ ಶಕ್ತಿ ಯೋಜನೆ ಆರಂಭವಾದ ನಂತರ ನಷ್ಟ ಉಂಟಾಗುತ್ತಿದ್ದ ಹಿನ್ನೆಲೆಯಲ್ಲಿ ಕಳೆದ 1ತಿಂಗಳಿನಿAದ ಸದರಿ ಮಾರ್ಗವನ್ನು ಬಂದ್ ಮಾಡಲಾಗಿದೆ. ಅದೇ ಸಮಯಕ್ಕೆ ಬೆಂಗಳೂರಿನವರೆಗೆ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಅಲ್ಲಿಂದ ತಿರುಪತಿಗೆ ಸಾಕಷ್ಟು ಬಸ್ ವ್ಯವಸ್ಥೆ ಇದ್ದು ಪ್ರಯಾಣಿಕರಿಗೆ ಮಾರ್ಗ ರದ್ದತಿಯಿಂದ ತೊಂದರೆಯಾಗಿಲ್ಲ ಎಂದು ಸಭೆಗೆ ಮಾಹಿತಿ ನೀಡಿದರು,_

_ಇದೆ ಸಂದರ್ಭದಲ್ಲಿ ಚೆಸ್ಕಾಂ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಪುಟ್ಟಸ್ವಾಮಿ, ತಾಲ್ಲೂಕು ಆಹಾರ ಇಲಾಖೆಯ ಅಧಿಕಾರಿ ವಿನೋದ್, ಜಿಲ್ಲಾ ಉದ್ಯೋಗಾಧಿಕಾರಿ ಕುಸುಮ, ತಮ್ಮ ತಮ್ಮ ಇಲಾಖೆಯ ಪ್ರಗತಿಯ ವರದಿಯನ್ನು ಸಭೆಯಲ್ಲಿ ಮಂಡಿಸಿದರು._

_ಇದೆ ಸಂದರ್ಭದಲ್ಲಿ ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ತಾಲೂಕು ಪಂಚಾಯಿತಿ ಇಒ ಕೆ.ಸುಷ್ಮ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯರಾದ ಸಿ.ಆರ್.ಪಿ.ಕುಮಾರ್, ಬೂಕನಕೆರೆ ರೂಪಾ ಚಂದ್ರಶೇಖರ್, ಬೊಮ್ಮೇನಹಳ್ಳಿ ಲತಾ, ಕನಕದಾಸನಗರ ಶಿವಮ್ಮ, ಕೆ.ಎಸ್.ಆರ್.ಟಿ.ಸಿ ಶಿವಣ್ಣ, ಸಿಂಗನಹಳ್ಳಿ ಗೋಪಾಲ್, ಬಂಡಿಹೊಳೆ ಯೋಗೇಶ್(ಉಮೇಶ್), ಗೋವಿಂದನಹಳ್ಳಿ ಶ್ಯಾಮಣ್ಣ, ಬೂಕನಕೆರೆ ಬಿ.ಸಿ ಮಾಧು, ದೊಡ್ಡತಾರಹಳ್ಳಿ ಸೋಮಶೇಖರ್, ಹಾಫೀಜ್ ಉಲ್ಲಾ, ಯಗಚಗುಪ್ಪೆ ಶಿವಲಿಂಗಪ್ಪ, ಗ್ಯಾರಂಟಿ ವಿಷಯ ನಿರ್ವಾಹಕಿ ಚೈತ್ರ ಇತರರು ಉಪಸ್ಥಿತರಿದ್ದರು._

*_ವರದಿ: ಸಾಯಿಕುಮಾರ್. ಎನ್‌. ಕೆ._*