ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ಅನುದಾನವನ್ನು ಬೇರೆ ಗ್ಯಾರಂಟಿ ಯೋಜನೆಗಳಿಗೆ ಬಳಕೆ… ಎ. ಐ. ಬಿ. ಎಸ್. ಪಿ. ಖಂಡನೆ
ದೊಡ್ಡಬಳ್ಳಾಪುರ:ಕರ್ನಾಟಕ ಸರ್ಕಾರ ಎಸಿಎಸ್‌ಪಿ/ಟಿಎಸ್‌ಪಿ ಅನುದಾನವನ್ನು 7ಸಿ ಅನ್ವಯ ಬೇರೆ ಯೋಜನೆಗಳಿಗೆ ಅಂದರೆ ಗ್ಯಾರಂಟಿ ಯೋಜನೆಗಳಿಗೆ ಬಳಸುತ್ತಾ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ವಂಚನೆಯಾಗಿದೆ ಎಂದು ಅಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿಯ ತಾಲ್ಲೂಕು ಅಧ್ಯಕ್ಷ ನಂಜೇಶ್ ಖಂಡಿಸಿದ್ದಾರೆ.
ಕರ್ನಾಟಕ ರಾಜ್ಯ ಸರ್ಕಾರದ ಚುಕ್ಕಾಣಿ ಹಿಡಿದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು 2023-24ನೇ ಸಾಲಿನಲ್ಲಿ ಎಸಿಎಸ್‌ಪಿ/ಟಿಎಸ್‌ಪಿ ಯೋಜನೆಯಡಿ 34.423 ಕೋಟಿ ರೂ. ಅನುದಾನ ಮತ್ತು 2025-26ನೇ ಸಾಲಿನಲ್ಲಿ 42,017.51 ಕೋಟಿ ರೂ. ಘೋಷಣೆ ಮಾಡಿ, ಪರಿಶಿಷ್ಟ ಜಾತಿ ವರ್ಗದ ಸಮಾಜವನ್ನು ಅಭಿವೃದ್ಧಿಗೊಳಿಸುವ ಆಶ್ವಾಸನೆ ನೀಡಿದ್ದರು. ಆದರೆ, ಈಗ ಸರಕಾರದ 5 ಗ್ಯಾರಂಟಿಗಳಾದ ಅನ್ನಭಾಗ್ಯಕ್ಕೆ 1,670.76 ಕೋಟಿ ರೂ., ಯುವ ನಿಧಿ ಗೆ 162 ಕೋಟಿ ರೂ., ಶಕ್ತಿ ಯೋಜನೆಗೆ 1,537 ಕೋಟಿ ರೂ., ಗೃಹ ಜ್ಯೋತಿ ಯೋಜನೆಗೆ 2,626 ಕೋಟಿ ಹಾಗೂ
ಗೃಹಲಕ್ಷ್ಮಿಗೆ 7,438.08 ಕೋಟಿ. ಒಟ್ಟು ರೂ. 11,896.84 ಕೋಟಿ ರೂ.ಗಳನ್ನು ಬಳಕೆ ಮಾಡಲು ಸರಕಾರ ಮುಂದಾಗಿ ರುವುದನ್ನು ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ ತೀವ್ರವಾಗಿ ಖಂಡಿಸುತ್ತದೆ ಎಂದರು. 201300 2018ರವರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಇದ್ದಾಗ ಎಸ್ ಸಿಎಸ್‌ಪಿ/ಟಿಎಸ್‌ಪಿ ಯೋಜನೆ ಜಾರಿಗೆ ತಂದು ಈ ಕಾಯ್ದೆಯನ್ನು ಉಲ್ಲಂಘಿ ಸಿದವರಿಗೆ 6 ತಿಂಗಳು ಜೈಲು ಶಿಕ್ಷೆ ವಿಧಿ ಸುವ ಅವಕಾಶ ಕಲ್ಪಿಸಲಾಗಿತ್ತು. ಆದರೆ, ದೊಡ್ಡ ಪ್ರಮಾಣದಲ್ಲಿ ಎಸ್‌ಸಿಎಸ್ ಪಿ /ಟಿಎಸ್‌ಪಿ ಹಣವನ್ನು ನಿಗದಿತ ಅಭಿವೃದ್ಧಿ ಯೋಜನೆಗಳಿಗೆ ಬಳಸದೆ ಅನ್ಯ ಬಾಬುಗಳಿಗೆ ವರ್ಗಾವಣೆ ಆದ ಪ್ರಕರಣದಲ್ಲಿ ಯಾವೊಬ್ಬ ಅಧಿಕಾರಿಗೂ ಶಿಕ್ಷೆ ಆಗಲಿಲ್ಲ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣಕ್ಕಾಗಿ 2023-24 ಮತ್ತು 2024-25ನೇ ಸಾಲಿನಲ್ಲಿ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆಯಡಿ ಮೀಸಲಿಟ್ಟ ಅನುದಾನವನ್ನು ರಾಜ್ಯ ಸರ್ಕಾರವು ವಿವಿಧ ಯೋಜನೆಗಳ ಅನುಷ್ಠಾನಕ್ಕಾಗಿ ಬಳಕೆ ಮಾಡಿಕೊಂಡಿರುವುದು ದಲಿತರಿಗೆ ಅನ್ಯಾಯ ಮಾಡಿದಂತಾಗಿದೆ ಪರಿಶಿಷ್ಟರ ಕಲ್ಯಾಣಕ್ಕಾಗಿ ಮೀಸಲಿಟ್ಟ ಹಣವನ್ನು ಅನ್ಯ ಉದ್ದೇಶಕ್ಕಾಗಿ ಬಳಸುವುದು ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆಯನ್ನು ದುರ್ಬಳಕೆ ಮಾಡಿದಂತಾಗಿ, ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಕಾಯ್ದೆಯ ಉಲ್ಲಂಘನೆಯಾಗಿರುತ್ತದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಶ್ರೇಯೋಭಿವೃದ್ಧಿಗೆ ಬಳಕೆ ಮಾಡಬೇಕಾದ ಅನುದಾನಕ್ಕೆ ಕೊಕ್ಕೆ ಹಾಕಿ ಸರ್ಕಾರದ ವಿವಿಧ ಯೋಜನೆಗಳಿಗೆ ಅನುದಾನವನ್ನು ಬಳಕೆ ಮಾಡುವುದರಿಂದ ತಳಸಮುದಾಯಗಳ ಅಭಿವೃದ್ಧಿಗೆ ಹಿನ್ನಡೆಯಾಗುತ್ತದೆ. ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆಯಡಿ ಮೀಸಲಿಟ್ಟ ಅನುದಾನವನ್ನು ಯಾವುದಕ್ಕೂ ವರ್ಗಾವಣೆ ಮಾಡುವುದಿಲ್ಲ ಎಂದು ಆಶ್ವಾಸನೆ ನೀಡಿದ ಸರ್ಕಾರ 2023-24 ಮತ್ತು 2024-25ನೇ ಸಾಲಿನಲ್ಲಿ ಒಟ್ಟು 25 ಸಾವಿರ ಕೋಟಿಗಳಿಗೂ ಅಧಿಕ ಮೊತ್ತವನ್ನು ವಿವಿಧ ಯೋಜನೆಗಳ ಅನುಷ್ಠಾನಕ್ಕೆ ವರ್ಗಾವಣೆ ಮಾಡಿರುವುದರಿಂದ ದಲಿತರ ಶ್ರೇಯೋಭಿವೃದ್ಧಿಗೆ ಹಿನ್ನಡೆಯಾಗುತ್ತದೆ. ಎಂದು ಅರೋಪಿಸಿದ್ದಾರೆ