ಶ್ರಾವಣ ಶನಿವಾರದ ಪ್ರಯುಕ್ತ ಶ್ರೀ ಶನಿ ಮಹಾತ್ಮ ಸ್ವಾಮಿಗೆ ಷಣ್ಮುಗನ ಅಲಂಕಾರ
ತಾವರೆಕೆರೆ : ಹೊಸಕೋಟೆ ತಾಲ್ಲೂಕಿನ ನಂದಗುಡಿ ಹೋಬಳಿಯ ತಾವರೆಕೆರೆ ಗ್ರಾಮದ ಶ್ರೀ ವರಪ್ರದಾಯಕ ಶನೇಶ್ವರ ಸ್ವಾಮಿಯ ದೇವಾಲಯದಲ್ಲಿ ಎರಡನೇ ಶ್ರಾವಣ ಶನಿವಾರದ ಪ್ರಯುಕ್ತ ಶ್ರೀ ಶನಿಮಹಾತ್ಮ ಸ್ವಾಮಿಗೆ ಷಣ್ಮುಗ ಮತ್ತು ಗಂಧಲೇಪಿತ ಅಲಂಕಾರ ಹಾಗೂ ವಿಶೇಷ ಹೂವಿನ ಅಲಂಕಾರದೊಂದಿಗೆ ದೇವರಿಗೆ ಪಂಚಾಮೃತ ಅಭಿಷೇಕ ಮಾಡಿ ತೀರ್ಥ ಪ್ರಸಾದ ವಿನಿಯೋಗ ಮಾಡಲಾಯಿತು.
ಪೂಜಾ ಕಾರ್ಯಕ್ರಮವು ದೇವಾಲಯದ ಪ್ರಧಾನ ಅರ್ಚಕರಾದ ಸುನಿಲ್ ಶಾಸ್ತ್ರಿ ಅವರ ನೇತೃತ್ವದಲ್ಲಿ ನಡೆಯಿತು ನಂತರ ಮಾತನಾಡಿದ ಅವರು ಶ್ರಾವಣ ಮಾಸದಲ್ಲಿ ಪ್ರತಿವಾರವೂ ವಿಶೇಷ ಅಲಂಕಾರದೊಂದಿಗೆ ಸ್ವಾಮಿಗೆ ಪೂಜೆ ಸಲ್ಲಿಸಲಾಗುತ್ತದೆ ಕಳೆದ ವಾರ ಸ್ವಾಮಿಗೆ ಬೆಣ್ಣೆ ಅಲಂಕಾರ ಈ ವಾರವು ಷಣ್ಮುಗ ಸ್ವಾಮಿಯ ಅಲಂಕಾರ ಮಾಡಲಾಗಿದೆ ಬೆಳಗಿನ ಜಾವ ಅಭಿಷೇಕ ಹಾಗೂ ವಿಶೇಷ ಹೂವಿನ ಅಲಂಕಾರ ಮಾಡಿ ನೆರೆದಿದ್ದ ಸಾವಿರಾರು ಭಕ್ತಾದಿಗಳಿಗೆ ತೀರ್ಥ ಪ್ರಸಾದ ವಿನಿಯೋಗವು ಸಹ ಏರ್ಪಡಿಸಲಾಗಿತ್ತು ಎಂದು ತಿಳಿಸಿದರು.
ಪೂಜಾ ಕಾರ್ಯಕ್ರಮದಲ್ಲಿ ತಾವರೆಕೆರೆ ಗ್ರಾಮಸ್ಥರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಿದ್ದರು.