ಇತಿಹಾಸ ಪುಟಕ್ಕೆ ಶಕ್ತಿ ಯೋಜನೆ :ರಾಜ್ಯ ಸರ್ಕಾರಕ್ಕೆ ಮಹಿಳಾ ಕಾಂಗ್ರೆಸ್ ವತಿಯಿಂದ ಪ್ರಶಂಸೆ
ಕೊರಟಗೆರೆ : ತಾಲೂಕು ಮಹಿಳಾ ಬ್ಲಾಕ್ ಕಾಂಗ್ರೆಸ್ ವತಿಯಿಂದ ಡಾ ಜಿ ಪರಮೇಶ್ವರ್ ರವರಿಗೆ ಹಾಗೂ ನಾಡಿನ ಜನತೆಗೆ 2025ರ ಗೌರಿ ಗಣೇಶ ಹಬ್ಬದ ಪ್ರಯುಕ್ತ ಕೊರಟಗೆರೆ ಕಾಂಗ್ರೆಸ್ ಭವನದಲ್ಲಿ ಮಹಿಳಾ ಕಾಂಗ್ರೆಸ್ ಆಯೋಜಿಸಿದ ಕಾರ್ಯಕ್ರಮದಲ್ಲಿ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಶ್ರೀಮತಿ ಜಯಮ್ಮ .ಟೌನ್ ಅಧ್ಯಕ್ಷರು ಬ್ಲಾಕ್ ಕಾಂಗ್ರೆಸ್ ಲಕ್ಷ್ಮಿ ಜಗದೀಶ್.ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಲಕ್ಷ್ಮಿ.ಟೌನ್ ಉಪಾಧ್ಯಕ್ಷರು ಗೀತಾ.ಟೌನ್ ಸಹ ಉಪಾಧ್ಯಕ್ಷರು ಲಕ್ಷ್ಮಿ ಕಾರ್ಯಕ್ರಮವನ್ನು ಉದ್ಘಾಟಿಸಿದರು
ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಜಯಮ್ಮ ಮಾತನಾಡಿ ಇಡೀ ನಾಡು ಹೆಮ್ಮೆ ಪಡುವ ಕ್ಷಣವಿದು. ನಮ್ಮ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಯು ಪ್ರತಿಷ್ಠಿತ “Golden Book of World Records” ನಲ್ಲಿ ದಾಖಲಾಗಿ ಇತಿಹಾಸ ನಿರ್ಮಿಸಿದೆ.
ಮಹಿಳಾ ಸಬಲೀಕರಣದೆಡೆಗಿನ ದಿಟ್ಟ ಹೆಜ್ಜೆಯಾದ ಶಕ್ತಿ ಯೋಜನೆಯು ಚಾಲನೆಗೊಂಡ ದಿನದಿಂದ ಅಂದರೆ ಜೂನ್ 11, 2023 ರಿಂದ ಜುಲೈ 25, 2025 ರ ಅವಧಿಯಲ್ಲಿ 504 ಕೋಟಿ 90 ಲಕ್ಷಕ್ಕೂ ಹೆಚ್ಚು ಬಾರಿ ಮಹಿಳಾ ಪ್ರಯಾಣಿಕರು ಉಚಿತವಾಗಿ ಸ್ವಾವಲಂಬಿ ಬದುಕಿನೆಡೆಗೆ ಪ್ರಯಾಣಿಸುವ ಮೂಲಕ ಈ ಇತಿಹಾಸ ಸೃಷ್ಟಿಸಿದ್ದಾರೆ.
ಈ ಸಾಧನೆಯ ಶ್ರೇಯ ಉದ್ಯೋಗ, ಶಿಕ್ಷಣ, ವೈದ್ಯಕೀಯ ಚಿಕಿತ್ಸೆ ಮುಂತಾದ ಉದ್ದೇಶಗಳಿಗಾಗಿ ನಿತ್ಯ ಸಂಚರಿಸುವ ನಾಡಿನ ನನ್ನ ತಾಯಂದಿರಿಗೆ, ಅಕ್ಕ – ತಂಗಿಯರಿಗೆ ಸಲ್ಲಬೇಕು.
ಔದ್ಯೋಗಿಕ ವಲಯದಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ, ಜೊತೆಗೆ ರಾಜ್ಯದ ತಲಾದಾಯವು ದೇಶದಲ್ಲೇ ನಂಬರ್ 01 ಸ್ಥಾನಕ್ಕೆ ತಲುಪಿದೆ. ಶಕ್ತಿ ಯೋಜನೆಯು ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ, ಔದ್ಯೋಗಿಕವಾಗಿ ಮಹಿಳೆಯರನ್ನು ಸಬಲರನ್ನಾಗಿಸುತ್ತದೆ ಎಂಬ ನನ್ನ ನಂಬಿಕೆ ಈ ಮೂಲಕ ಹುಸಿಯಾಗಲಿಲ್ಲ.
ಯೋಜನೆಯನ್ನು ಜಾರಿಗೆ ಕೊಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿಯವರಿಗೂ, ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗಕ್ಕೂ ಅಭಿನಂದನೆಗಳನ್ನು ಸಲ್ಲಿಸಿ ಡಾಕ್ಟರ್ ಜಿ ಪರಮೇಶ್ವರ್ ಅವರು ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿಯಾಗಲಿ ಎಂದು ಆಶಿಸುತ್ತೇನೆ ಎಂದು ತಿಳಿಸಿದರು.
ವರದಿ : ಭರತ್ ಕೆ