ಜಂಗಮಕೋಟೆ ಗ್ರಾಮ ಪಂಚಾಯಿತಿ ವತಿಯಿಂದಉ ದ್ಯಾನವನದಲ್ಲಿ ಬೆಳೆದಿದ್ದ ಗಿಡಗಂಟಿಗಳು ತೆರವು
ಕರ್ನಾಟಕ ಮಿತ್ರ ಪತ್ರಿಕೆ ವರದಿ ಫಲ ಶ್ರುತಿ….
ಶಿಡ್ಲಘಟ್ಟ: ಜಂಗಮಕೋಟೆ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಪಕ್ಕದಲ್ಲಿ ಗ್ರಾಮ ಪಂಚಾಯಿತಿಯವರು ನರೇಗಾ ಯೋಜನೆಯಡಿ ನಿರ್ಮಾಣ ಮಾಡಿರುವ ಉದ್ಯಾನವನದಲ್ಲಿ ದಟ್ಟವಾಗಿ ಬೆಳೆದು ನಿಂತಿದ್ದ ಗಿಡಗಂಟಿಗಳನ್ನು ಗ್ರಾಮ ಪಂಚಾಯಿತಿ ವತಿಯಿಂದ ತೆರವುಗೊಳಿಸಿ, ಸಾರ್ವಜನಿಕರ ಉಪಯೋಗಕ್ಕೆ ಅನುವು ಮಾಡಿಕೊಡಲಾಗಿದ್ದು, ಸಾರ್ವಜನಿಕರಿಂದ ಗ್ರಾಮ ಪಂಚಾಯಿತಿಯವರ ಕಾರ್ಯವೈಖರಿಗೆ ಪ್ರಶಂಸೆ ವ್ಯಕ್ತವಾಗಿದೆ.
’ಆಸ್ಪತ್ರೆಯ ಪಕ್ಕದಲ್ಲಿರುವ ಜಂಗಮಕೋಟೆ ಗ್ರಾಮ ಪಂಚಾಯಿತಿಯ ಉದ್ಯಾನವನಕ್ಕೆ ಕಾಡುತ್ತಿರುವ ರೋಗ’ ಎಂಬ ಶೀರ್ಷಿಕೆಯಲ್ಲಿ ಸೆ.೨.ರಂದು ಸುದ್ದಿಯನ್ನು ಪ್ರಕಟಿಸಲಾಗಿತ್ತು. ಸುದ್ದಿಯಿಂದ ಎಚ್ಚೆತ್ತುಕೊಂಡಿರುವ ಗ್ರಾಮ ಪಂಚಾಯಿತಿ ಅಧಿಕಾರಿಗಳು, ಉದ್ಯಾನವನದ ಮುಂಭಾಗದಲ್ಲಿ ಬೆಳೆದಿದ್ದ ಗಿಡಗಂಟಿಗಳು ಹಾಗೂ ಉದ್ಯಾನವನದ ಒಳಗೆ ಬೆಳೆದಿದ್ದ ಗಿಡಗಂಟಿಗಳನ್ನು ತೆರವುಗೊಳಿಸಿ, ಸಾರ್ವಜನಿಕರು ನಿರ್ಭಯವಾಗಿ ವಾಯುವಿಹಾರ ನಡೆಸುವುದಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ.
ಆಸ್ಪತ್ರೆಗೆ ಬರುವ ರೋಗಿಗಳು ಕೂಡಾ ಉದ್ಯಾನವನದಲ್ಲಿ ಕುಳಿತುಕೊಂಡು ವಿಶ್ರಾಂತಿ ಪಡೆದುಕೊಳ್ಳಲು ಅನುಕೂಲವಾಗಿದೆ. ಸಾರ್ವಜನಿಕರಿಗೆ ಆಗುತ್ತಿದ್ದ ತೊಂದರೆಯ ಕುರಿತು, ಸುದ್ದಿಯನ್ನು ಪ್ರಕಟಿಸಿ ಸಾರ್ವಜನಿಕರ ಬಗ್ಗೆ ಕಳಕಳಿ ತೋರಿಸಿರುವ ಕರ್ನಾಟಕ ಮಿತ್ರ ಪತ್ರಿಕೆಗೂ ಧನ್ಯವಾದಗಳು, ಪತ್ರಿಕೆಗಳು ಸಮಾಜದಲ್ಲಿನ ಎಲ್ಲಾ ಸಮಸ್ಯೆಗಳಿಗೆ ಕನ್ನಡಿಯಾಗಿ ಆಡಳಿತ ವರ್ಗವನ್ನು ಎಚ್ಚರಿಸುತ್ತಿರುವುದಕ್ಕೆ ಪತ್ರಿಕೆ ಕೈ ಗನ್ನಡಿಯಾಗಿದೆ. ಗ್ರಾಮ ಪಂಚಾಯಿತಿ ಪಿಡಿಓ ಅವರು, ತ್ವರಿತವಾಗಿ ಸಾರ್ವಜನಿಕರಿಗೆ ಆಗುತ್ತಿದ್ದ ಸಮಸ್ಯೆಗೆ ಸ್ಪಂದಿಸಿದ್ದಾರೆ ಎಂದು ಸ್ಥಳೀಯರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
೦೪.ಎಸ್.ಡಿ.ಎಲ್.ಪಿ.೦೧: ಜಂಗಮಕೋಟೆ ಗ್ರಾಮ ಪಂಚಾಯಿತಿ ಪಕ್ಕದಲ್ಲಿರುವ ಉದ್ಯಾನವನದಲ್ಲಿನ ಅವ್ಯವಸ್ಥೆಯ ಕುರಿತು, ಕರ್ನಾಟಕ ಮಿತ್ರ ಪತ್ರಿಕೆಯಲ್ಲಿ ಪ್ರಕಟಗೊಂಡಿದ್ದ ಸುದ್ದಿ.
೦೪.ಎಸ್.ಡಿ.ಎಲ್.ಪಿ.೦೨: ಸುದ್ದಿ ಪ್ರಕಟಗೊಂಡ ನಂತರ ಗ್ರಾಮ ಪಂಚಾಯಿತಿಯ ಅಧಿಕಾರಿಗಳು, ಗಿಡಗಂಟಿಗಳನ್ನು ತೆರವುಗೊಳಿಸಿರುವುದು.