ಜಿಲ್ಲೆಯಲ್ಲಿ ಗ್ಯಾರಂಟಿ ಯೋಜನೆ ಶೇ100ರಷ್ಟು ಅನುಷ್ಠಾನಕ್ಕೆ ಅವಿರತ ಶ್ರಮ–ಗ್ಯಾರಂಟಿ ಯೋಜನೆ ಕುಂದುಕೊರತೆ ಸಭೆ : ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ರಾಜಣ್ಣ
ಹೊಸಕೋಟೆ:ಸರ್ಕಾರ ಜಾರಿ ಮಾಡಿರುವ ಪಂಚ ಗ್ಯಾರಂಟಿಗಳ ಶೇ 100ರಷ್ಟು ಸಮರ್ಪಕ ಅನುಷ್ಠಾನಕ್ಕೆ ಅಧಿಕಾರಿಗಳು ಸೇರಿದಂತೆ ಅನುಷ್ಠಾನ ಸಮಿತಿ ಸದಸ್ಯರು ಅವಿರತ ಶ್ರಮಿಸುತ್ತಿದ್ದೇವೆ ಎಂದು ಗ್ಯಾರಂಟಿ ಯೋಜನೆ ಅನುಷ್ಟಾನ ಸಮಿತಿ ಜಿಲ್ಲಾಧ್ಯಕ್ಷ ರಾಜಣ್ಣ ತಿಳಿಸಿದರು.
ತಾಲೂಕಿನ ಚೊಕ್ಕಹಳ್ಳಿ ಗ್ರಾಮ ಪಂಚಾಯತ್ ಆವರಣದಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಕುಂದುಕೊರತೆ ಸಭೆಯಲ್ಲಿ ಮಾತನಾಡಿದರು.
ರಾಜ್ಯ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳಿಗಾಗಿ ವಾರ್ಷಿಕ 56 ಸಾವಿರ ಕೋಟಿ ಅನುದಾನವನ್ನು ಮೀಸಲಿರಿಸಿದ್ದು ಪಲಾನುಭವಿಗಳಿಗೆ ಸಮರ್ಪಕವಾಗಿ ತಲುಪಿಸುವುದೇ ಗುರಿಯಾಗಿದೆ. ರಾಜ್ಯದಲ್ಲಿ ಗೃಹಲಕ್ಷಿö್ಮಗೆ 860 ಕೋಟಿ ಜಿಲ್ಲೆಗೆ 230ಕೋಟಿ ಹಣವನ್ನು ಖರ್ಚು ಮಾಡಲಾಗಿದೆ. ಹಸಿವು ಮುಕ್ತ ರಾಜ್ಯ, ಮಹಿಳಾ ಸಬಲಿಕರಣ, ಆರ್ಥಿಕ ಅಭಿವೃದ್ಧಿ ಮಾಡುವ ಉದ್ದೇಶದಿಂದ ಪಂಚ ಗ್ಯಾರಂಟಿ ಜಾರಿ ಮಾಡಲಾಗಿದ್ದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ.ಶಿವಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸಬೇಕು. ಎಂದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಬಚ್ಚೆಗೌಡ ಮಾತನಾಡಿ ಗ್ಯಾರಂಟಿ ಯೋಜನೆಗಳನ್ನು ಪಕ್ಷಾತೀತವಾಗಿ ರಾಜ್ಯದಲ್ಲಿ ಅನುಷ್ಠಾನ ಮಾಡುತ್ತಿದ್ದು ಯೋಜನೆಗಳ ಸಾಧಕ-ಭಾದಕಗಳ ಕುರಿತು ಹಾದಿ-ಬೀದಿಯಲ್ಲಿ ಮಾತನಾಡುವ ಬದಲಾಗಿ ಈ ರೀತಿಯ ಸಭೆಗೆ ಬಂದು ಚರ್ಚೆ ಮಾಡಬೇಕು. ಗ್ಯಾರಂಟಿ ಯೋಜನೆ ತಲುಪುವಲ್ಲಿ ಏನಾದರೂ ಸಮಸ್ಯೆ ಇದ್ದರೆ ಸ್ಥಳೀಯ ಗ್ರಾಪಂಗೆ ದೂರು ನೀಡಿದರೆ ಅವರ ಮೂಲಕ ನಮ್ಮ ಸಮಿತಿ ಪರಿಹಾರ ಕೊಡುತ್ತದೆ ಎಂದರು.
ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸದಸ್ಯರಾದ ಹೇಮಣ್ಣ, ಮಂಜುನಾಥ್, ಅಮ್ಜದ್ ಬೇಗ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಡಿಸಿ.ಲಕ್ಷ್ಮಿ, ಗ್ರಾಮ ಪಂಚಾಯತ್ ಅಧ್ಯಕ್ಷೆ ಮಧುಶ್ರೀ ಕೆಂಪಣ್ಣ, ಉಪಾಧ್ಯಕ್ಷ ಆಂಜಿನಪ್ಪ, ಸದಸ್ಯರಾದ ತಮ್ಮಯ್ಯ ಗೌಡ, ಸಂಪಣ್ಣ, ಲಲಿತ್ ಮಹೇಶ್, ರಾಮ ಮೂರ್ತಿ, ನಾಗೇಶ್, ಮಂಜುಳ ನಾಗರ್ಜುನ, ವೇದವತಿ ರಾಮು, ಪಿಡಿಓ ರವಿಕುಮಾರ್, ಆಹಾರ ಇಲಾಖೆ ಅಧಿಕಾರಿ ಶಿವಕುಮಾರ್ ಹಾಜರಿದ್ದರು.





