ಆಟೋ ಚಾಲಕರ ಮತ್ತು ಮಾಲಿಕರ ಸಂಘದಿಂದ ಕನ್ನಡ ರಾಜ್ಯೋತ್ಸವ
ತಿಪಟೂರು:‘ನಗರದ ಕೆಎಸ್ಆರ್ಟಿಸಿ ಬಸ್ ಸ್ಟಾಂಡ್ ನಿಲ್ದಾಣದ ಪಕ್ಕ ಭುವನೇಶ್ವರಿ ಆಟೋ ಚಾಲಕರು ಮತ್ತು ಮಾಲೀಕರ ಸಂಘದ ವತಿಯಿಂದ ಆಯೋಜನೆ ಮಾಡಲಾಗಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಕೆಪಿಸಿಸಿ ಸದಸ್ಯರಾದ ವಿ ಯೋಗೇಶ್ ಅವರು ಧ್ವಜಾರೋಹಣ ನೆರವೇರಿಸಿ ದೀಪ ಬೆಳಗುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು
ನಂತರ ಮಾತನಾಡಿದ ಕೆಪಿಸಿಸಿ ಸದಸ್ಯರಾದ ವಿ ಯೋಗೇಶ್ ರವರು
ಕನ್ನಡ ನಾಡು ನುಡಿ ಭಾಷೆಯ ಮೇಲಿರುವ ಆಟೋ ಚಾಲಕರ ಭಾಷಾಭಿಮಾನವನ್ನು ನಾವೆಲ್ಲರೂ ಗೌರವಿಸಬೇಕು. ಕನ್ನಡ ಭಾಷೆಯನ್ನು ನವೆಂಬರ್ ತಿಂಗಳಿಗೆ ಮಾತ್ರ ಸೀಮಿತಗೊಳಿಸದೆ ವರ್ಷ ಪೂರ್ತಿ ಕನ್ನಡಾಭಿಮಾನ ಬೆಳೆಸಿಕೊಳ್ಳಬೇಕು,’’ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ. ವೈದ್ಯರಾದ ಡಾಕ್ಟರ್ ಶ್ರೀಧರ್. ಕಾಂಗ್ರೆಸ್ ಯುವ ಮುಖಂಡರಾದ ನಿಖಿಲ್ ರಾಜಣ್ಣ ಸೇರಿದಂತೆ ಚಾಲಕರು ಮಾಲೀಕರು ಸೇರಿದಂತೆ ಸಾರ್ವಜನಿಕರು ಭಾಗವಹಿಸಿದ್ದರು..
ವರದಿ: ಮಂಜು ಗುರುಗದಹಳ್ಳಿ











