ಶ್ರೀ ನಿಮಿಷಾಂಬ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ೭೦ ನೇ ಕನ್ನಡ ರಾಜ್ಯೋತ್ಸವ ಆಚರಣೆ
ಕರ್ನಾಟಕದಲ್ಲಿ ಕನ್ನಡಿಗರದ್ದೆ ಸಾರ್ವಭೌಮ , ದೇಶದಲ್ಲಿ ನೂರಾರು ಭಾಷೆಗಳಿವೆ ಆದರೆ ನಮ್ಮ ಮೊದಲ ಆದ್ಯತೆ ಕನ್ನಡಕ್ಕೆ ಮಾತ್ರ – ಪ್ರಿಯಾಂಕ ರಮೇಶ್.
ತಾವರೆಕೆರೆ : ಹೊಸಕೋಟೆ ತಾಲ್ಲೂಕಿನ ನಂದಗುಡಿ ಹೋಬಳಿಯ ತಾವರೆಕೆರೆ ಗ್ರಾಮದ ಶ್ರೀ ನಿಮಿಷಾಂಬ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಧ್ಯಕ್ಷರಾದ ಪ್ರಿಯಾಂಕಾ ರಮೇಶ್ ಅವರ ಅಧ್ಯಕ್ಷತೆಯಲ್ಲಿ ನಾಡ ಹಬ್ಬ ೭೦ ನೇ ಅರ್ಥಪೂರ್ಣ ಕನ್ನಡ ರಾಜ್ಯೋತ್ಸವ ಆಚರಣೆ.
ನಂತರ ಮಾತನಾಡಿ ಮೊದಲಿಗೆ ನಾಡಿನ ಸಮಸ್ತ ಜನತೆಗೆ 70ನೇ ಕನ್ನಡ ರಾಜ್ಯೋತ್ಸವದ ಶುಭಾಶಯಗಳು. ಕರ್ನಾಟಕದಲ್ಲಿ ಕನ್ನಡಿಗರೇ ಸಾರ್ವಭೌಮ ದೇಶದಲ್ಲಿ ನೂರಾರು ಭಾಷೆಯನ್ನು ಮಾತನಾಡಬಹುದು ಆದರೆ ನಮ್ಮ ತಾಯಿ ಭಾಷೆಗೆ ನಮ್ಮ ಮೊದಲ ಆದ್ಯತೆ ಕನ್ನಡ ಭಾಷೆಗೆ ಇರಬೇಕು. ಈಗಿನ ಪರಿಸ್ಥಿತಿಯಲ್ಲಿ ಒಲಸಿಗರ ಸಂಖ್ಯೆ ಹೆಚ್ಚಾಗಿರುವುದರಿಂದ ಕನ್ನಡ ಬಳಕೆ ಅತಿ ವಿರಳವಾಗಿ ಕಾಣುತ್ತಿದೆ ಇದು ಹೀಗೆ ಮುಂದುವರೆದರೆ ಮುಂದೊಂದು ದಿನ ಕನ್ನಡ ಮರೆತು ಬೇರೆ ಭಾಷೆ ಮಾತನಾಡುವ ಪರಿಸ್ಥಿತಿಗೆ ಬಂದರೂ ಆಶ್ಚರ್ಯ ಪಡಬೇಕಾಗಿಲ್ಲ. ಸ್ಥಳೀಯರು ಹಾಗೂ ಕನ್ನಡಿಗರು ಇತರೆ ರಾಜ್ಯದಿಂದ ಬಂದ ವಲಸಿಗರ ಜೊತೆ ಹೆಚ್ಚಾಗಿ ಕನ್ನಡದಲ್ಲಿ ಮಾತನಾಡುವುದನ್ನು ರೂಢಿಸಿಕೊಳ್ಳಬೇಕು ಹಾಗೂ ಈ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಕಡೆಗೂ ಗಮನಹರಿಸಿ ಗ್ರಾಮಕ್ಕೆ ಹಾಗೂ ವಿದ್ಯಾಸಂಸ್ಥೆಗೆ ಹೆಚ್ಚಿನ ಕೀರ್ತಿ ತರುವ ಕೆಲಸಕ್ಕೆ ಮುಂದಾಗಬೇಕು ಎಂದು ತಿಳಿಸಿದರು.
ಪಂಚಾಯತಿ ಅಭಿವೃದ್ಧಿ ಅಧಿಕಾರಿ ಮುನಿಗಂಗಯ್ಯ ಮಾತನಾಡಿ ಕನ್ನಡ ರಾಜ್ಯೋತ್ಸವವು ಕರ್ನಾಟಕದ ಏಕೀಕರಣವನ್ನು ಸ್ಮರಿಸುವ ಮಹತ್ವದ ಹಬ್ಬವಾಗಿದ್ದು, 1956ರ ನವೆಂಬರ್ 1ರಂದು ಕನ್ನಡ ಮಾತನಾಡುವ ಪ್ರದೇಶಗಳು ಒಂದಾಗಿ ಕರ್ನಾಟಕ ರಾಜ್ಯವು ಅಸ್ತಿತ್ವಕ್ಕೆ ಬಂದ ದಿನವನ್ನು ಸೂಚಿಸುತ್ತದೆ. ಈ ಹಬ್ಬವು ಕನ್ನಡಿಗರ ಭಾಷೆ, ಸಂಸ್ಕೃತಿ, ಮತ್ತು ಪರಂಪರೆಯನ್ನು ಗೌರವಿಸುವ ಸಂಕೇತವಾಗಿದೆ. ಇದು ಕನ್ನಡ ರಾಜ್ಯದ ಏಕೀಕರಣಕ್ಕಾಗಿ ಹೋರಾಡಿದ ಮಹಾಪುರುಷರನ್ನು ಸ್ಮರಿಸುತ್ತದೆ ಮತ್ತು ಕನ್ನಡದ ಅಭಿಮಾನವನ್ನು ಹೆಚ್ಚಿಸುತ್ತದೆ. ರಾಜ್ಯೋತ್ಸವವನ್ನು ಪ್ರತಿ ವರ್ಷ ನವೆಂಬರ್ 1 ರಂದು ಆಚರಿಸಲಾಗುತ್ತದೆ . ರಾಜ್ಯ ಸರ್ಕಾರವು ಕನ್ನಡ ರಾಜ್ಯೋತ್ಸವದ ದಿನದಂದು ಕರ್ನಾಟಕದಲ್ಲಿ ಅದರಲ್ಲೂ ಕನ್ನಡಕ್ಕಾಗಿ ತಮ್ಮದೇ ಆದ ಕೊಡುಗೆ ನೀಡಿದ ಕೆಲಸಗಳನ್ನು ಗುರುತಿಸಿ ರಾಜ್ಯೋತ್ಸವ ಪ್ರಶಸ್ತಿಯನ್ನು ಸಹ ನೀಡಲಾಗುತ್ತದೆ ಎಂದು ತಿಳಿಸಿದರು.
ಸಂಸ್ಥೆಯ ಪ್ರಾಂಶುಪಾಲರು ಹಾಗೂ ಮುಖ್ಯಸ್ಥರಾದ ನರಸಿಂಹಮೂರ್ತಿ ಮಾತನಾಡಿ ನಮ್ಮ ಕೈಗಾರಿಕಾ ವಿದ್ಯಾ ಸಂಸ್ಥೆಯಲ್ಲಿ ಇದೆ ಮೊದಲ ಬಾರಿಗೆ ವಿಜೃಂಭಣೆಯ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗಿದೆ. ಕಾಲೇಜಿನ ಆವರಣದಲ್ಲಿ ಧ್ವಜಾರೋಹಣ ಹಾಗೂ ಶ್ರೀ ಕನ್ನಡ ಮಾತಿಗೆ ವಿಶೇಷ ಪೂಜೆ ಸಲ್ಲಿಸುವುದರ ಮೂಲಕ ಪಂಚಾಯಿತಿ ಅಧ್ಯಕ್ಷರಾದ ಪ್ರಿಯಾಂಕ ರಮೇಶ್ ಅವರಿಂದ ಚಾಲನೆ ನೀಡಲಾಯಿತು. ನಂತರ ಡೊಳ್ಳು ಕುಣಿತದೊಂದಿಗೆ ತಾಯಿ ಭುವನೇಶ್ವರಿಯ ಭಾವಚಿತ್ರದೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು ಮುಂದಿನ ದಿನಗಳಲ್ಲಿ ತಾಲೂಕಿಗೆ ಮಾದರಿಯಾಗುವಂತಹ ಕಾರ್ಯಕ್ರಮ ಮಾಡಲಾಗುತ್ತದೆ ಎಂದು ತಿಳಿಸಿದರು .
ಇದೇ ಸಂದರ್ಭದಲ್ಲಿ ತಾವರೆಕೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಪ್ರಿಯಾಂಕ ರಮೇಶ್, ಪಂಚಾಯತಿ ಅಭಿವೃದ್ಧಿ ಅಧಿಕಾರಿ ಮುನಿ ಗಂಗಯ್ಯ, ಮಾಜಿ ಅಧ್ಯಕ್ಷರಾದ ರವಿಕುಮಾರ್, ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಅಶ್ವಿನಿ ದೇವರಾಜ್ , ಪ್ರಾಂಶುಪಾಲರಾದ ನರಸಿಂಹಮೂರ್ತಿ, ಕಾರ್ಯದರ್ಶಿ ವಿಮಲಾ ನರಸಿಂಹಮೂರ್ತಿ , ಪ
ಹಿರಿಯ ಪತ್ರಕರ್ತರಾದ ಟಿ. ನಾಗರಾಜ್ , ಕಟ್ಟಡ ಮಾಲೀಕರಾದ ಟಿ.ಎಂ ನಾಗರಾಜ್ , ಪುತ್ರಕರ್ತರಾದ ತಾವರೆಕೆರೆ ವಿನೋದ್ ಹಾಗೂ ಸಂಸ್ಥೆಯ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು.





