ಕೆಡಿಪಿ ವಾರ್ಷಿಕ ಸಭೆಯಲ್ಲಿ ಬಾಕಿ ವಿದ್ಯಾರ್ಥಿ ವೇತನ ಮಂಜೂರಾತಿಗೆ ಆಗ್ರಹ : ಕೆ ಎನ್ ರಾಜಣ್ಣ
ಮಧುಗಿರಿ : ಪಟ್ಟಣದ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ತಾಲ್ಲೂಕು ಪಂಚಾಯತ್ ವತಿಯಿಂದ ಹಮ್ಮಿಕೊಂಡಿದ್ದ 2025-26ನೇ ಸಾಲಿನ ಸೆಪ್ಟೆಂಬರ್ ಮಾಹೆಯ ಅಂತ್ಯಕ್ಕೆ ಇದ್ದಂತೆ 2ನೇ ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (KDP) ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಪ್ರಗತಿಯಲ್ಲಿರುವ ಕಾಮಗಾರಿಗಳ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದು ಪ್ರಗತಿ ಪರಿಶೀಲನೆ ನೆಡೆಸಿದನು.
ಹಾಗೂ ಮಧುಗಿರಿ ತಾಲ್ಲೂಕಿನ ಎಲ್ಲಾ ಶಾಲಾ ಮತ್ತು ಕಾಲೇಜುಗಳಿಗೆ ಅಧಿಕಾರಿಗಳು ಭೇಟಿ ನೀಡಿ ವಿದ್ಯಾರ್ಥಿಗಳ ದಾಖಲೆಗಳನ್ನು ಪಡೆದು ಬಾಕಿ ಇರುವ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನ ಮಂಜೂರು ಮಾಡಿಸಲು ತುರ್ತಾಗಿ ಸೂಕ್ತ ಕ್ರಮ ಕೈಗೊಳ್ಳಲು ಅದೇಶಿಸಿದರು.
ಮಧುಗಿರಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ತಾಲ್ಲೂಕು ಮಟ್ಟದ ೭ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ದಿನಾಂಕ 24.12.2025 ರಂದು ಹಮ್ಮಿಕೊಂಡಿರುವುದರಿಂದ ಇದರ ಪೂರ್ವಬಾವಿ ಸಭೆಯಲ್ಲಿ ಭಾಗವಹಿಸಿ ಸಲಹೆ ಸೂಚನೆ ನೀಡಿದ್ದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಯಾದ ಸಂಜೀವ ರೆಡ್ಡಿಯವರು ಸೇರಿದಂತೆ ಜಿಲ್ಲೆ ಹಾಗೂ ತಾಲ್ಲೂಕು ಮಟ್ಟದ ಹಿರಿಯ ಅಧಿಕಾರಿಗಳು, ಕನ್ನಡ ಸಾಹಿತ್ಯ ಪರಿಷತ್ತು ಪದಾಧಿಕಾರಿಗಳು, ಮುಖಂಡರುಗಳು ಉಪಸ್ಥಿತರಿದ್ದರು.
ವರದಿ : ಹರೀಶ C A





