ಪ್ರಗತಿ ಆಂಗ್ಲ ಶಾಲೆಯ ಮಕ್ಕಳು ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯ ಸ್ಪರ್ಧೆ ಯಲ್ಲಿ ಭಾಗವಹಿಸಿ ಬಹುಮಾನಗಳನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ
ದೇವನಹಳ್ಳಿ: ತಾಲೂಕಿನ ಸರ್ಕಾರಿ ಬಾಲಕರ ಕಾಲೇಜಿನಲ್ಲಿ ದಿನಾಂಕ 29/11/ 2025 ರ ಶನಿವಾರ ದಂದು ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು ಈ ಕಾರ್ಯಕ್ರಮದಲ್ಲಿ ಪ್ರಗತಿ ಆಂಗ್ಲ ಶಾಲೆಯ ವಿದ್ಯಾರ್ಥಿಗಳು ಹಲವಾರು ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಶಸ್ತಿಗಳನ್ನು ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಹಿರಿಯ ಪ್ರಾಥಮಿಕ ವಿದ್ಯಾರ್ಥಿ ಗಳಾದ
1) ಹೇಮಿತ. ಪಿ ಐದನೇ ತರಗತಿ (ಅಭಿನಯ ಗೀತೆ)ಪ್ರಥಮ ಸ್ಥಾನ.
2) ಮನ್ವಂತ್ ಗೌಡ. ಆರ್. ಐದನೇ ತರಗತಿ ( ಮಿಮಿಕ್ರಿ ಪ್ರಥಮ ಸ್ಥಾನ)
ಪ್ರಶಸ್ತಿಗಳನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಎಲ್ಲಾ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷರಾದ ಸತೀಶ್ ಕುಮಾರ್ ಸರ್ ವ್ಯವಸ್ಥಾಪಕ ನಿರ್ದೇಶಕರಾದ ಎಸ್ .ಕೃಪಾಶಂಕರ್ , ಸರ್ ಆಡಳಿತಾಧಿಕಾರಿಗಳಾದ ಶ್ರೀಮತಿ ರಜತಕೃಪಾಶಂಕರ್ ಮೇಡಂ ಮತ್ತು ಮುಖ್ಯ ಶಿಕ್ಷಕರಾದ ಜೆ.ಎನ್. ಪ್ರಕಾಶ್ ರವರು ಹಾಗೂ ಎಲ್ಲಾ ಶಿಕ್ಷಕ ವೃಂದದವರು ಅಭಿನಂದಿಸಿದ್ದಾರೆ. ಹಾಗೂ ಜಿಲ್ಲಾ ಮಟ್ಟದಿಂದ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಲಿ ಎಂದು ಶುಭ ಹಾರೈಸಿದರು.





