ಕೋಡಿ ಶ್ರೀಗಳ ಭವಿಷ್ಯ :ಸಂಕ್ರಾಂತಿಯ ನಂತರ ರಾಜ್ಯ ರಾಜಕಾರಣದಲ್ಲಿ ಮಹತ್ತರವಾದ ಬದಲಾವಣೆಗಳಾಗಲಿವೆ. ಮುಖ್ಯಮಂತ್ರಿಗಳ ಬದಲಾವಣೆ ನಡೆಯುವುದು ಖಚಿತ
ಕೃಷ್ಣರಾಜಪೇಟೆ:ಮಕರ ಸಂಕ್ರಮಣದ ನಂತರ ರಾಜ್ಯ ರಾಜಕಾರಣದಲ್ಲಿ ಮಹತ್ತರ ಬದಲಾವಣೆಗಳಾಗಲಿವೆ ಎಂದು ಹಾರನಹಳ್ಳಿ ಕೋಡಿಮಠದ ಡಾ.ಶ್ರೀ.ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮಿಜಿಗಳು ಹೇಳಿದರು.ಅವರು ಎಂದು ಖಾಸಗಿ ಕಾರ್ಯಕ್ರಮದ ನಿಮಿತ್ತ ಕೃಷ್ಣರಾಜಪೇಟೆ ಪಟ್ಟಣಕ್ಕೆ ಆಗಮಿಸಿದಾಗ ಪತ್ರಕರ್ತರೊಂದಿಗೆ ಮಾತನಾಡಿದರು._
_ಶಿವನ ಮುಡಿಯ ಮೇಲಿರುವ ಮಲ್ಲಿಗೆಯು ಶಿವನ ಪಾದಕ್ಕೆ ಬೀಳಲೇಬೇಕು. ರಾಜ್ಯ ರಾಜಕಾರಣದ ಗೊಂದಲವು ಸಂಪೂರ್ಣವಾಗಿ ಬಗೆ ಹರಿಯಲಿದ್ದು ಸುಖಾಂತ್ಯ ವಾಗಲಿದೆ. ಮಕರ ಸಂಕ್ರಾಂತಿಯ ನಂತರ ರಾಜ್ಯ ರಾಜಕಾರಣದ ನಾಯಕತ್ವದ ಗುದ್ದಾಟವು ಬಗೆಹರಿಯಲಿದೆ ಎಂದು ಶ್ರೀಗಳು ಮಾರ್ಮಿಕವಾಗಿ ನುಡಿದರು._
_ನಾನು ಶಾಸ್ತ್ರ ಹೇಳುವವನಲ್ಲ ಶಾಸ್ತ್ರಕಾರನಲ್ಲ ಮುಂದೆ ನಡೆಯುವ ವಿಚಾರಗಳನ್ನು ತಿಳಿಸುವ ಶಕ್ತಿ ಹೊಂದಿದ್ದೇನೆ ಅಷ್ಟೇ ಎಂದು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಕೋಡಿ ಶ್ರೀಗಳು ರಾಷ್ಟ್ರ ರಾಜಕಾರಣದಲ್ಲಿಯೂ ಕೂಡ ಯುಗಾದಿಯ ನಂತರ ಸಮಸ್ಯೆಗಳು ಎದುರಾಗಲಿವೆ. ಇತ್ತೀಚಿಗೆ ನಡೆದ ಬಾಂಬ್ ಬ್ಲಾಸ್ಟ್ ನಂತಹ ಅಹಿತಕರ ಘಟನೆಗಳು ರಾಷ್ಟ್ರಮಟ್ಟದಲ್ಲಿ ನಡೆಯಲಿವೆ ಎಂದು ತಿಳಿಸಿದ ಕೋಡಿ ಶ್ರೀಗಳು ರಾಜಕಾರಣಿಗಳು ರಾಜಕಾರಣವನ್ನೇ ವೃತ್ತಿಯನ್ನಾಗಿ ಮಾಡಿಕೊಂಡಿರುವಾಗ ಮಠಾಧೀಶರು ಸಮಾಜದ ಒಳಿತಿಗಾಗಿ ರಾಜಕೀಯವಾಗಿ ಏಕೆ ಸಲಹೆ ಸೂಚನೆಗಳನ್ನು ನೀಡಬಾರದು ಎಂದು ಮಾರ್ಮಿಕವಾಗಿ ನುಡಿದ ಶ್ರೀಗಳು ಮಠಗಳು ಮೊದಲು ಜಾತಿಯತೆಯಿಂದ ದೂರವಿರಬೇಕು ಜಾತಿ ಪದ್ಧತಿಯು ನಾಗರೀಕ ಸಮಾಜಕ್ಕೆ ಅಂಟಿರುವ ಶಾಪವಾಗಿದ್ದು ಮಠಾಧೀಶರುಗಳು ಮೊದಲು ಜಾತಿಯ ಸಂಕೋಲೆಗಳಿಂದ ಬರಬಂದು ಜಾತ್ಯತೀತ ಸಮಾಜದ ನಿರ್ಮಾಣಕ್ಕಾಗಿ ಗಟ್ಟಿಯಾಗಿ ನಿಂತಾಗ ಮಾತ್ರ ನಾಗರೀಕ ಸಮಾಜದಲ್ಲಿ ಬದಲಾವಣೆಯನ್ನು ಕಾಣಲು ಸಾಧ್ಯವಿದೆ ಎಂದು ತಿಳಿಸಿದ ಶ್ರೀಗಳು ಪ್ರಸ್ತುತ ಸಂದರ್ಭದಲ್ಲಿ ರಾಜಕಾರಣ ದಿಕ್ಕುತಪ್ಪಿದೆ, ತತ್ವ ಆದರ್ಶ ಹಾಗೂ ಮೌಲ್ಯಗಳು ಮಾಯವಾಗಿವೆ. ಹಣವಿದ್ದವರು ರಿಯಲ್ ಎಸ್ಟೇಟ್ ಕುಳಗಳು ರಾಜಕಾರಣದಲ್ಲಿ ವಿಜೃಂಬಿಸುತ್ತಿದ್ದಾರೆ. ಪ್ರಜಾಪ್ರಭುತ್ವದ ಭವಿಷ್ಯದ ದೃಷ್ಟಿಯಿಂದ ಇದು ಒಳ್ಳೆಯ ಬೆಳವಣಿಗೆಯಲ್ಲ ಎಂದು ವಿಷಾದ ವ್ಯಕ್ತಪಡಿಸಿದ ಶ್ರೀಗಳು ಮಕರ ಸಂಕ್ರಾಂತಿಯ ನಂತರ ಮತ್ತೆ ನಾನು ಪತ್ರಕರ್ತರ ಮುಂದೆ ಬಂದು ಹಲವು ಹೊಸ ವಿಚಾರಗಳ ಬಗ್ಗೆ ಮಾತನಾಡುತ್ತೇನೆ. ಸದ್ಯಕ್ಕೆ ಇಷ್ಟು ಸಾಕು ಎಂದು ಪತ್ರಕರ್ತರ ಪ್ರಶ್ನೆಗಳಿಗೆ ಅಂತ್ಯ ಹಾಡಿದರು._
_ಇದೇ ಸಂದರ್ಭದಲ್ಲಿ ಕೃಷ್ಣರಾಜಪೇಟೆ ತಾಲೂಕಿನ ಸಮಾಜ ಸೇವಕರು ಹಾಗೂ ರಾಜ್ಯ ಆರ್.ಟಿ.ಓ ಅಧಿಕಾರಿಗಳ ಸಂಘದ ಅಧ್ಯಕ್ಷರಾದ ಮಲ್ಲಿಕಾರ್ಜುನ ಅವರ ಚಾರಿಟಬಲ್ ಟ್ರಸ್ಟ್ ಕಚೇರಿಗೆ ಭೇಟಿ ನೀಡಿದ ಶ್ರೀಗಳು ಕೋಡಿ ಶ್ರೀಗಳು ಮಲ್ಲಿಕಾರ್ಜುನ ದಂಪತಿಗಳಿಗೆ ಶುಭ ಹಾರೈಸಿದರು._
_ಈ ಸಂದರ್ಭದಲ್ಲಿ ಉದ್ಯಮಿ ಬಿ.ರಾಜಶೇಖರ್ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪೂರ್ಣಚಂದ್ರ ತೇಜಸ್ವಿ, ಮಾಜಿ ಅಧ್ಯಕ್ಷರಾದ ಎಂ.ಕೆ.ಹರಿಚರಣತಿಲಕ್, ಕೆ.ಆರ್.ನೀಲಕಂಠ ಗೌರವಾಧ್ಯಕ್ಷ ಬಳ್ಳೇಕೆರೆ ಮಂಜುನಾಥ್, ಮುಖಂಡರಾದ ಆಲಂಬಾಡಿ ಕಾವಲು ದೇವರಾಜು, ಜಯರಾಮೇಗೌಡ,ಕ್ರೈಸ್ಟ್ ದ ಕಿಂಗ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಶಿವರಾಜ್, ಪ್ರಥಮ ದರ್ಜೆ ಗುತ್ತಿಗೆದಾರರಾದ ಮನು ಶರತ್, ಅರಳಕುಪ್ಪೆ ಸೋಮೇಗೌಡ, ಪುರಸಭೆ ಮಾಜಿ ಸದಸ್ಯ ಕೋಳಿ ನಾಗರಾಜು ಸೇರಿದಂತೆ ಸ್ತ್ರೀಶಕ್ತಿ ಸ್ವಸಹಾಯ ಸಂಘಗಳ ಪ್ರತಿನಿಧಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು._
*_ವರದಿ: ಸಾಯಿಕುಮಾರ್. ಎನ್. ಕೆ,_*





