ಶರತ್ ಬಚ್ಚೇಗೌಡರ ಹುಟ್ಟುಹಬ್ಬದ ಪ್ರಯುಕ್ತ ಉಚಿತ ಆರೋಗ್ಯ ತಪಾಸಣೆ ಶಿಬಿರ
ತಾವರೆಕೆರೆ : ಹೊಸಕೋಟೆ ತಾಲ್ಲೂಕಿನ ಬೆಂಡಿಗಾನಹಳ್ಳಿ ಗ್ರಾಮದಲ್ಲಿ ಶಾಸಕ ಶರತ್ ಬಚ್ಚೇಗೌಡರ ಹುಟ್ಟುಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಜಾಗೃತಿ ಸಮಿತಿಯ ರಾಜ್ಯ ಅಧ್ಯಕ್ಷರಾದ ಬಿಟಿ ವಿಶ್ವನಾಥ್ ಅವರ ಅಧ್ಯಕ್ಷತೆಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ, ಉಚಿತ ಕಣ್ಣಿನ ತಪಾಸಣೆ ಶಿಬಿರ ಹಾಗೂ ರಕ್ತದಾನ ಶಿಬಿರವನ್ನು ಮಾಡುವುದರ ಮೂಲಕ ಅರ್ಥಪೂರ್ಣ ಹುಟ್ಟುಹಬ್ಬ ಆಚರಿಸಲಾಯಿತು.
ನಂತರ ಮಾತನಾಡಿ ತಾಲೂಕು ಅಭಿವೃದ್ಧಿ ಪಥದಲ್ಲಿ ಸಾಗಲು ಮೂಲ ಕಾರಣಭೂತರಾದ ತಾಲೂಕಿನ ಹೆಮ್ಮೆಯ ಶಾಸಕರು ಶರತ್ ಬಚ್ಚೇಗೌಡರ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಿಂದ ಕಾರ್ಯಕ್ರಮಕ್ಕೆ ಹೂಗುಚ್ಛ ಹಾರ ತುರಾಯಿ ಈ ರೀತಿಯ ದುಂಡು ವೆಚ್ಚ ಮಾಡುವುದನ್ನು ಬಿಟ್ಟು ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಪುಸ್ತಕ ಕಲಿಕಾ ಸಾಮಗ್ರಿಗಳನ್ನು ನೀಡುವುದು ಉತ್ತಮವೆಂದು ತಾಲೂಕಿನಾದ್ಯಂತ ಜನತೆಗೆ ತಿಳಿಸಿ ಹೆಚ್ಚಿನ ಸಂಖ್ಯೆಯಲ್ಲಿ ಕಲಿಕಾ ಸಾಮಗ್ರಿಗಳು ಸಂಗ್ರಹವಾಗಿದ್ದು ಅವುಗಳನ್ನು ಮುಂದಿನ ದಿನಗಳಲ್ಲಿ ತಾಲೂಕಿನ ಎಲ್ಲಾ ಶಾಲೆಗಳಿಗೆ ನೀಡಲಾಗುತ್ತದೆ. ಇಂದು ನಡೆದ ರಕ್ತದಾನ ಶಿಬಿರದಲ್ಲಿ 150ಕ್ಕೂ ಹೆಚ್ಚು ಜನ ರಕ್ತದಾನ ಮಾಡಿ 80ಕ್ಕೂ ಹೆಚ್ಚು ಜನ ಕಣ್ಣಿನ ತಪಾಸಣೆ ಮಾಡುವುದರ ಮೂಲಕ ಕಾರ್ಯಕ್ರಮ ಮಾಡಲಾಯಿತು. ಮುಂದಿನ ದಿನಗಳಲ್ಲಿ ರಾಜ್ಯ ಸರ್ಕಾರದ ಮಂತ್ರಿ ಗಿರಿ ಪಟ್ಟವನ್ನು ಅಲಂಕರಿಸಿ ಉನ್ನತ ಸ್ಥಾನದಲ್ಲಿ ಇರಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಜಾಗೃತಿ ಸಮಿತಿಯ ತಾಲೂಕು ಹಾಗೂ ರಾಜ್ಯ ಪದಾಧಿಕಾರಿಗಳು, ಸ್ಥಳೀಯ ನಾಯಕರು ಅಧಿಕಾರಿಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು.





