ಮಳ್ಳೂರು ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಹೇಮಂತ್ ಕುಮಾರ್, ಉಪಾಧ್ಯಕ್ಷರಾಗಿ ಎನ್.ಅಣ್ಣಪ್ಪ. ಅವಿರೋಧ ಆಯ್ಕೆ
ಶಿಡ್ಲಘಟ್ಟ: ತಾಲೂಕಿನ ಮಳ್ಳೂರು ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘ ಅಧ್ಯಕ್ಷರಾಗಿ ಭಕ್ತರಹಳ್ಳಿ ಹೇಮಂತ್ ಕುಮಾರ್, ಉಪಾಧ್ಯಕ್ಷರಾಗಿ ಮೇಲೂರು ಎನ್.ಅಣ್ಣಪ್ಪ ಅವರು, ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸಹಕಾರ ಸಂಘದ ಆವರಣದಲ್ಲಿ ನಡೆದ ಚುನಾವಣೆಯಲ್ಲಿ, ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಗಳಿಗೆ ಒಂದೊಂದೇ ನಾಮಪತ್ರವನ್ನು ಸಲ್ಲಿಸಿದ್ದರಿಂದ ಇಬ್ಬರೂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಸುನೀತಾ ಘೋಷಣೆ ಮಾಡಿದ್ದಾರೆ.
ಈ ವೇಳೆ ಮಾತನಾಡಿದ ನೂತನ ಅಧ್ಯಕ್ಷ ಹೇಮಂತ್ ಕುಮಾರ್ ಅವರು ಮಾತನಾಡಿ, ಸಹಕಾರಿ ಸಂಘದಲ್ಲಿ ಸಿಗುವಂತಹ ಸೌಲಭ್ಯಗಳನ್ನು ರೈತರು, ಸದುಪಯೋಗ ಮಾಡಿಕೊಳ್ಳಬೇಕು. ರೈತರ ಹಿತ ಕಾಪಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.
ಉಪಾಧ್ಯಕ್ಷ ಎನ್.ಅಣ್ಣಪ್ಪ ಮಾತನಾಡಿ, ರೈತರು ಆರ್ಥಿಕವಾಗಿ ಸದೃಢರಾಗಬೇಕು. ಅವರ ಕಷ್ಟಕ್ಕೆ ತಕ್ಕ ಪ್ರತಿಫಲ ಸಿಗಬೇಕು. ಸಹಕಾರ ಸಂಘದ ಹಿಂದಿನ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ನಿರ್ದೇಶಕರುಗಳ ಮಾರ್ಗದರ್ಶನದಲ್ಲಿ ಸಂಘವನ್ನು ರೈತಹಿತವಾಗಿ ಮುನ್ನಡೆಸಿಕೊಂಡು ಹೋಗುತ್ತೇವೆ ಎಂದರು.
ಹಾಪ್ ಕಾಮ್ಸ್ ಮಾಜಿ ಅಧ್ಯಕ್ಷ ಭಕ್ತರಹಳ್ಳಿ ಮುನೇಗೌಡ, ಗಂಗನಹಳ್ಳಿ ಬಿ.ಸಿ.ವೆಂಕಟೇಶಪ್ಪ, ಮುತ್ತೂರು ಚಂದ್ರೇಗೌಡ, ಮೂರ್ತಿ, ಮಳ್ಳೂರು ಎಂ.ಆರ್. ಮುನಿಕೃಷ್ಣಪ್ಪ, ನಾಗರಾಜ್, ನಾರಾಯಣಸ್ವಾಮಿ,(ನಾಣಿ) ನಿಶಾಂತ್, ಮಂಜುನಾಥ್, ಮೇಲೂರು ಆರ್.ಮುರಳಿ, ಎಸ್.ಕೆ.ಮಯೂರ, ಗಿರೀಶ್ ನಾಯಕ್, ಕುಶಾಲ್, ಚಿದಾನಂದ್, ಮುನಿರಾಜು, ಮುಂತಾದವರು ಹಾಜರಿದ್ದರು.
೦೪.ಎಸ್.ಡಿ.ಎಲ್.ಪಿ.೦೨: ಶಿಡ್ಲಘಟ್ಟ ತಾಲೂಕು ಮಳ್ಳೂರು ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘಕ್ಕೆ ನೂತನವಾಗಿ ಆಯ್ಕೆಯಾಗಿರುವ ಹೇಮಂತ್ ಕುಮಾರ್ ಹಾಗೂ ಎನ್.ಅಣ್ಣಪ್ಪ ಅವರನ್ನು ಮುಖಂಡರು ಅಭಿನಂದಿಸಿದರು.





