ದೊಡ್ಡಬಳ್ಳಾಪುರದ ಡಿಕ್ರಾಸ್ ಬಳಿ ಯುವಕನ ಹತ್ಯೆ!
ದೊಡ್ಡಬಳ್ಳಾಪುರ : ನಗರದ ಡಿಕ್ರಾಸ್ ಬಳಿ ಮಾರಾಕಾಸ್ತ್ರಗಳಿಂದ ಹತ್ಯೆಗೈದು ಆರೋಪಿಗಳು ಪರಾರಿಯಾಗಿದ್ದಾರೆ.
ದೊಡ್ಡಬಳ್ಳಾಪುರ ನಗರದ ಡಿಕ್ರಾಸ್ ಬಳಿ ಇಂದು ರಾತ್ರಿ ಸುಮಾರು 10 :20ರ ಸಮಯದಲ್ಲಿ ಘಟನೆ ನಡೆದಿದ್ದು, ಘಟನೆಯಲ್ಲಿ ದೀಪಕ್ (30) ಯುವಕನ ಕೊಲೆಯಾಗಿದೆ, ಮೃತ ಯುವಕ ಜಾಲಪ್ಪ ಕಾಲೇಜ್ ಬಳಿಯ ನಿವಾಸಿ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ದೊಡ್ಡಬಳ್ಳಾಪುರ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ, ಹತ್ಯೆಗೈದು ಪರಾರಿಯಾಗಿರುವ ಆರೋಪಿಗಳ ಪತ್ತೆಗಾಗಿ ಪೊಲೀಸರ ತಂಡ ಬೆನ್ನತ್ತಿರುವುದ್ದಾಗಿ ಮಾಹಿತಿ ತಿಳಿದು ಬಂದಿದೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.





