ನಾಳೆ ಗೋ ಸಂರಕ್ಷಣಾ ತಿದ್ದುಪಡಿ ವಿಧೇಯಕದ ವಿರುದ್ಧ ಪ್ರತಿಭಟನೆ.
ದೊಡ್ಡಬಳ್ಳಾಪುರ: ಗೋ ಹತ್ಯೆಯನ್ನು ತಡೆಯಲು ಹಿಂದಿನ ಸರ್ಕಾರ ಜಾರಿಗೆ ತಂದಿದ್ದ ಕಾನೂನನ್ನು ಸಡಿಲಗೊಳಿಸಿ ಗೋ ಹತ್ಯೆಗೆ ಸಹಕಾರ, ಪ್ರೋತ್ಸಾಹ ನೀಡಲು ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೆ ತರಲು ಮುಂದಾಗಿರುವ ನೂತನ ಗೋ ಸಂರಕ್ಷಣಾ ತಿದ್ದುಪಡಿ ವಿಧೇಯಕದ ವಿರುದ್ಧ ವಿಶ್ವ ಹಿಂದೂ ಪರಿಷದ್ ಜಿಲ್ಲಾ ಗೋ ರಕ್ಷಾ ವಿಭಾಗದಿಂದ ಸೋಮವಾರ ಬೆಳಿಗ್ಗೆ 11:00 ಗಂಟೆಗೆ ದೊಡ್ಡಬಳ್ಳಾಪುರ ತಾಲ್ಲೂಕು ಕಚೇರಿ ಮುಂಭಾಗ,ಬೃಹತ್ ಪ್ರತಿಭಟನೆಯನ್ನು ಆಯೋಜಿಸಲಾಗಿದೆ,
ರೈತಪರ ಸಂಘಟನೆಗಳು, ಪ್ರಾಣಿಪ್ರಿಯ ಸಂಸ್ಥೆಗಳು ಹಿಂದೂಪರ ಸಂಘಟನೆಗಳು ಸೇರಿದಂತೆ ಸಂಪೂರ್ಣ ನಾಗರಿಕ ಸಮಾಜ ಪ್ರತಿಭಟನೆಯಲ್ಲಿ ಭಾಗವಹಿಸಿ, ತಾಯಿ ಸ್ವರೂಪವಾದ ಗೋವಿನ ರಕ್ಷಣೆಗೆ ಮುಂದಾಗಬೇಕೆಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ ಬಜರಂಗದಳ ಸಂಯೋಜಕ ಕೃಷ್ಣಮೂರ್ತಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





