ದೇವಾಲಯಗಳ ನಿರ್ಮಾಣಕ್ಕಿಂತ ಶಿಕ್ಷಣ ಸಂಸ್ಥೆಗಳನ್ನು ರೂಪಿಸಿ,ಮಕ್ಕಳಿಗೆ ಉತ್ತಮ ಭವಿಷ್ಯ ನೀಡಿ – ಬೈರಾರೆಡ್ಡಿ
ಹೊಸಕೋಟೆ: ದೇವಾಲಯಗಳಿಗಿಂತ ಮಕ್ಕಳ ಭವಿಷ್ಯ ರೂಪಿಸುವ ಶಿಕ್ಷಣ ಸಂಸ್ಥೆಗಳು ಶ್ರೇಷ್ಠವಾಗಿವೆ. ಯಾವ ದೇಶದಲ್ಲಿ ದೇವಾಲಯಗಳಿಗಿಂತ ಶಾಲೆಗಳ ಗಂಟೆ ಹೆಚ್ಚು ಬಾರಿಸುತ್ತದೆಯೋ ಅಲ್ಲಿ ಶಿಕ್ಷಣ ಶ್ರೀಮಂತವಾಗಿರುತ್ತದೆ ಎಂದು ವಿದ್ಯಾವನ ಕಾಲೇಜಿನ ಪ್ರಾಂಶುಪಾಲ ಜಿ.ಭೈರರೆಡ್ಡಿ ತಿಳಿಸಿದರು.
ತಾಲೂಕಿನ ಅನುಗೊಂಡನಹಳ್ಳಿ ಹೋಬಳಿಯ ಸೌಖ್ಯ ರಸ್ತೆಯಲ್ಲಿರುವ ವಿದ್ಯಾವನ ಕಾಲೇಜಿನ 9ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಪೋಷಕರು ಲಕ್ಷ ಲಕ್ಷ ಹಣ ವ್ಯಯಮಾಡಿ ಕಾಲೇಜಿಗೆ ದಾಖಲಿಸಿದರೆ ಸಾಲದು, ಮಕ್ಕಳು ವಿದ್ಯಾಭ್ಯಾದಸ ಕಡೆ ಎಷ್ಟು ಗಮನ ಹರಿಸುತ್ತಿದ್ದಾರೆ ಎಂದು ವಿಚಾರಣೆ ಮಾಡಬೇಕು, ನಾವು ಉತ್ತಮ ಗುಣ ಮಟ್ಟದ ಶಿಕ್ಷಣವನ್ನು ಬೋದಿಸಿದರು ಸಹ ಮಕ್ಕಳ ಕಲಿಕೆ ಬಗ್ಗೆ ಆಗಾಗ ಪರೀಕ್ಷೆ ಮಾಡಬೇಕು, ಹಾಗು ಮಕ್ಕಳಿಗೆ ದುಬಾರಿ ಬೆಲೆ ಬೈಕು. ಮೊಬೈಲ್ ಕೊಡಿಸಿ ಮಕ್ಕಳನ್ನು ಆಳು ಮಾಡಬೇಡಿ ಈಗ ಶೋಕಿ ಜೀವನ ಹೆಚ್ಚಾಗಿ ವಿದ್ಯಾರ್ಥಿಗಳು ಕೆಟ್ಟ ಚಟ ಹಿಡಿಯುತ್ತಿದ್ದಾರೆ ಎಂದು ಕಿವಿ ಮಾತು ಹೇಳಿದರು,
ಬಳಿಕ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಮೋಹನ್ ಕುಮಾರ್ ಮಾತನಾಡಿ, 2024-25 ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ರಾಜ್ಯದಲ್ಲಿ 8 ನೇ ಪಡೆದಿತ್ತು. ಈ ಬಾರಿ ಹೆಚ್ಚಿನ ಫಲಿತಾಂಶ ಪಡೆಯುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಕ್ರಮ ಕೈಗೊಂಡು ಕಾರ್ಯ ಪ್ರವೃತ್ತವಾಗಿದೆ. ಸರ್ಕಾರಿ ಹಾಗೂ ಸರ್ಕಾರಿ ಅನುದಾನಿತ ಶಾಲೆಗಳಲ್ಲಿ ವಿಶೇಷ ತರಗತಿಗಳು ಹಾಗೂ ಆನ್ ಲೈನ್ ತರಗತಿಗಳನ್ನು ನಡೆಸುವ ಮೂಲಕ ಫಲಿತಾಂಶ ಹೆಚ್ಚಿಸಲು ಪ್ರಯತ್ನ ನಡೆಸಲಾಗುತ್ತಿದೆ. ವಿದ್ಯಾರ್ಥಿಗಳು ಮೊಬೈಲ್ ಗೀಳಿನಿಂದ ಹೊರಬಂದು ವಿದ್ಯಾಭ್ಯಾಸದ ಕಡೆ ಹೆಚ್ಚಿನ ಗಮನ ಹರಿಸಿದರೆ ಹೆಚ್ಚಿನ ಪ್ರಗತಿ ಕಾಣಬಹುದು ಎಂದರು,
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ವಿವಿಧ ಸಾಂಸ್ಕೃತಿಕ ನೃತ್ಯ ನಾಟಕ ಪ್ರದರ್ಶನ ನೀಡಿದರು. ಈ ಸಂದರ್ಭದಲ್ಲಿ ವಿದ್ಯಾವನ ಕಾಲೇಜಿನ ಪ್ರಾಂಶುಪಾಲ ಜಿ.ಭೈರರೆಡ್ಡಿ, ಶಾಲೆ ಅಧ್ಯಕ್ಷೆ ಸುಜಾತ , ಅರ್ಲಿ ಫೌಂಡೇಶನ್ ಶಾಲೆಯ ಸಂಸ್ಥಾಪಕ ರಾಘವ ರೆಡ್ಡಿ , ಜ್ಞಾನ ಸಂಸ್ಕೃತಿ ಪಬ್ಲಿಕ್ ಶಾಲೆ ಪ್ರಾಂಶುಪಾಲ ಸಂದೇಶ್ ಹಾಗೂ ವಿದ್ಯಾವನ ಕಾಲೇಜಿನ ಶಿಕ್ಷಕರು ಸಿಬ್ಬಂದಿ ವರ್ಗ ಹಾಜರಿದ್ದರು.





