*ನಿವೃತ್ತರಾದ ಹಿರಿಯ ಶಿಕ್ಷಕ ಕೆ.ಎಸ್.ರಾಜು ಅವರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ*
ಕೆ.ಆರ್.ಪೇಟೆ,ಡಿ.06: ತಾಲ್ಲೂಕಿನ ಅಗ್ರಹಾರಬಾಚಹಳ್ಳಿ ಸರ್ಕಾರಿ ಪ್ರೌಢಶಾಲೆಯ ಹಿರಿಯ ಶಿಕ್ಷಕರಾದ ಕೆ.ಎಸ್.ರಾಜು ಸುಮಾರು 34ವರ್ಷಗಳ ಕಾಲ ವಿವಿಧ ಶಾಲೆಗಳಲ್ಲಿ ಸಹ ಶಿಕ್ಷಕರಾಗಿ, ಮುಖ್ಯ ಶಿಕ್ಷಕರಾಗಿ ಉತ್ತಮ ಸೇವೆ ಸಲ್ಲಿಸಿ ವಯೋ ನಿವೃತ್ತಿಯಾದ ಹಿನ್ನೆಲೆಯಲ್ಲಿ ಎಸ್.ಡಿ.ಎಂ.ಸಿ ಹಾಗೂ ಶಾಲೆಯ ವತಿಯಿಂದ ಶಾಲಾ ಆವರಣದಲ್ಲಿ ಬೀಳ್ಕೊಡುಗೆ ಸಮಾರಂಭವನ್ನು ಹಮ್ಮಿಕೊಂಡು ಕೆ.ಎಸ್.ರಾಜು ಅವರನ್ನು ಸನ್ಮಾನಿಸಿ ಗೌರವಿಸುವ ಮೂಲಕ ಹೃದಯ ಸ್ಪರ್ಷಿಯಾಗಿ ಬೀಳ್ಕೊಡುಗೆ ನೀಡಲಾಯಿತು.
ಬೀಳ್ಕೊಡುಗೆ ಸಮಾರಂಭದ ಅಧ್ಯಕ್ಷತೆಯನ್ನು ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ ಎ.ವಿ.ಕೃಷ್ಣ ವಹಿಸಿಕೊಂಡಿದ್ದರು. ಶಾಲೆಯ ಮುಖ್ಯ ಶಿಕ್ಷಕರಾದ ಪುಟ್ಟರಾಜು ಅವರು ಪ್ರಾಸ್ತಾವಿಕ ನುಡಿಗಳನ್ನಾಡಿದರು.
ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶಿಲ್ಪ ಅವರು ಬೀಳ್ಕೊಡುಗೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ ಕೆ.ಎಸ್.ರಾಜು ಅವರು ಕ್ರಿಯಾಶೀಲವಾಗಿ ಹಾಗೂ ಪ್ರಾಮಾಣಿಕವಾಗಿ ಸುಮಾರು 34ವರ್ಷಗಳ ವಿವಿಧ ಸರ್ಕಾರಿ ಪ್ರೌಢಶಾಲೆಯಲ್ಲಿ ಉತ್ತಮವಾಗಿ ಸೇವೆ ಸಲ್ಲಿಸಿದ್ದಾರೆ. ನಮ್ಮ ಅಗ್ರಹಾರಬಾಚಹಳ್ಳಿ ಗ್ರಾಮದಲ್ಲಿ ಸುಮಾರು 18ವರ್ಷಗಳಿಂದ ಉತ್ತಮ ಸೇವೆ ಸಲ್ಲಿಸಿ ಈ ಭಾಗದ ಸಾವಿರಾರು ವಿದ್ಯಾರ್ಥಿಗಳಿಗೆ ವಿದ್ಯಾದಾನ ಮಾಡುವ ಮೂಲಕ ಸಾರ್ಥಕ ಸೇವೆಯನ್ನು ಸಲ್ಲಿಸಿದ್ದಾರೆ. ಮಕ್ಕಳಲ್ಲಿ ಓದು ಆಸಕ್ತಿಯನ್ನು ಮೂಡಿಸುವ ಸಲುವಾಗಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯುವ ವಿದ್ಯಾರ್ಥಿಗಳಿಗೆ ನಗದು ಬಹುಮಾನ ನೀಡಿ ಗೌರವಿಸುತ್ತಾ ಬಂದಿದ್ದಾರೆ. ಅಲ್ಲದೇ ಬಡ ಮಕ್ಕಳಿಗೆ ಲೇಖನ ಸಾಮಗ್ರಿ, ಸ್ಕೂಲ್ ಬ್ಯಾಗ್ ಅನ್ನು ಕೊಡುಗೆಯಾಗಿ ನೀಡುವ ಮೂಲಕ ಬಡ ಮಕ್ಕಳ ಗುಣಮಟ್ಟದ ವಿದ್ಯಾಭ್ಯಾಸದಲ್ಲಿ ದೇವರನ್ನು ಕಾಣುವ ಮನೋಭಾವನೆಯನ್ನು ಹೊಂದಿದ್ದಾರೆ. ಅದೇ ರೀತಿ ಶಾಲೆಯ ಅಭಿವೃದ್ಧಿ ಕಡೆಗೂ ಹೆಚ್ಚಿನ ಒಲವು ತೋರುತ್ತಿದ್ದರು. ಶಾಲೆ ಬಿಟ್ಟ ಮಕ್ಕಳನ್ನು ಹಾಗೂ ಅವರ ಪೋಷಕರನ್ನು ವಯಕ್ತಿಕವಾಗಿ ಬೇಟಿ ಮಾಡಿ ಸಮಸ್ಯೆ ತಿಳಿದುಕೊಂಡು, ಶಿಕ್ಷಣದ ಮಹತ್ವನ್ನು ತಿಳಿಸಿ, ಶಾಲೆ ಬಿಟ್ಟ ಮಕ್ಕಳನ್ನು ಮತ್ತೆ ಶಾಲೆಗೆ ಕರೆ ತರುವ ಮೂಲಕ ಅವರ ವಿದ್ಯಾಭ್ಯಾಸ ಮುಂದುವರೆಸಲು ಅನುವು ಮಾಡಿಕೊಡುತ್ತಿದ್ದರು. ಅಲ್ಲದೆ ಶಾಲೆಯ ಅಭಿವೃದ್ದಿಗೆ ಗ್ರಾಮ ಪಂಚಾಯಿತಿ ಹಾಗೂ ದಾನಿಗಳ ನೆರವು ಪಡೆದುಕೊಂಡು ಶೈಕ್ಷಣಿಕ ಪ್ರಗತಿಗೆ ಶ್ರಮಿಸುತ್ತಿದ್ದರು. ಇಂತಹ ವಿಶಾಲ ಮನೋಭಾವನೆಯನ್ನು ಹೊಂದಿದ್ದ ಕೆ.ಎಸ್.ರಾಜು ಅವರ ನಿವೃತ್ತಿಯ ಜೀವನ ಚನ್ನಾಗಿರಲಿ, ದೇವರು ಅವರಿಗೆ ಆಯಸ್ಸು, ಆರೋಗ್ಯ ನೀಡಲಿ ಎಂದು ಪಿಡಿಓ ಶಿಲ್ಪ ಅವರು ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಬಿ.ಪುಟ್ಟಸ್ವಾಮೀಗೌಡ, ಶಿಕ್ಷಣ ಸಂಯೋಜಕ ಎಂ.ಎಸ್.ಸುರೇಶ್, ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಕೆ.ಎನ್.ನಾಗೇಗೌಡ, ನಿವೃತ್ತ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಹನುಮಂತೇಗೌಡ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಿನ್ಸಿಪಾಲ್ ಪ್ರೊ.ಅನುರಾಧಾ, ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಎ.ಹೆಚ್.ಯೋಗೇಶ್, ಗ್ರಾಮ ಪಂಚಾಯಿತಿ ಸದಸ್ಯರಾದ ಶ್ರೀನಿವಾಸ್, ನೇತ್ರಾವತಿ, ಎಸ್.ಡಿ.ಎಂ.ಸಿ. ಉಪಾಧ್ಯಕ್ಷ ಎ.ಎಸ್.ಪರಮೇಶ್, ಸದಸ್ಯರಾದ ಆರ್.ಜಗದೀಶ್, ರೂಪೇಶಾಚಾರ್, ರುಕ್ಮಾಂಗದಾಚಾರ್, ಕುಮಾರ್, ಹೊಸಹೊಳಲು ಸೊಸೈಟಿ ನಿವೃತ್ತ ಕಾರ್ಯದರ್ಶಿ ತಿಮ್ಮಯ್ಯ, ಶಿಕ್ಷಕರಾದ ಪ್ರಸನ್ನಕುಮಾರ್, ಸೇರಿದಂತೆ ಹಲವು ಗಣ್ಯರು, ಎಲ್ಲಾ ಶಿಕ್ಷಕರು, ಎಲ್ಲಾ ಎಸ್.ಡಿ.ಎಂ.ಸಿ ಸದಸ್ಯರು, ಗ್ರಾಮದ ಮುಖಂಡರು ಹಾಗೂ ಕೆ.ಎಸ್.ರಾಜು ಹಿತೈಷಿಗಳು ಭಾಗವಹಿಸಿ ಸನ್ಮಾನಿಸಿ ಗೌರವಿಸುವ ಮೂಲಕ ರಾಜು ಅವರ ನಿವೃತ್ತಿಯ ಜೀವನ ಸುಖಕರವಾಗಿರಲಿ ಎಂದು ಶುಭ ಹಾರೈಸಿದರು.
ಚಿತ್ರಶೀರ್ಷಿಕೆ:07.ಕೆ.ಆರ್.ಪಿ-01: ಕೆ.ಆರ್.ಪೇಟೆ: ತಾಲ್ಲೂಕಿನ ಅಗ್ರಹಾರಬಾಚಹಳ್ಳಿ ಸರ್ಕಾರಿ ಪ್ರೌಢಶಾಲೆಯ ಹಿರಿಯ ಶಿಕ್ಷಕರಾದ ಕೆ.ಎಸ್.ರಾಜು ಸುಮಾರು 34ವರ್ಷಗಳ ಸಹ ಶಿಕ್ಷಕರಾಗಿ, ಮುಖ್ಯ ಶಿಕ್ಷಕರಾಗಿ ಉತ್ತಮ ಸೇವೆ ಸಲ್ಲಿಸಿ ವಯೋ ನಿವೃತ್ತಿಯಾದ ಹಿನ್ನೆಲೆಯಲ್ಲಿ ಎಸ್.ಡಿ.ಎಂ.ಸಿ ಹಾಗೂ ಶಾಲೆಯ ವತಿಯಿಂದ ಶಾಲಾ ಆವರಣದಲ್ಲಿ ಬೀಳ್ಕೊಡುಗೆ ಸಮಾರಂಭವನ್ನು ಹಮ್ಮಿಕೊಂಡು ಕೆ.ಎಸ್.ರಾಜು ಹಾಗೂ ಶ್ರೀಮತಿ ವಿಶಾಲಾಕ್ಷಿ ರಾಜು ಅವರನ್ನು ಸನ್ಮಾನಿಸಿ ಗೌರವಿಸುವ ಮೂಲಕ ಹೃದಯ ಸ್ಪರ್ಷಿಯಾಗಿ ಬೀಳ್ಕೊಡುಗೆ ನೀಡಲಾಯಿತು.





