--ಜಾಹೀರಾತು--

ಗ್ಯಾರಂಟಿ ಯೋಜನೆಗಳ ಬಡವರು ಮತ್ತು ಮಧ್ಯಮ ವರ್ಗದವರ ಆರ್ಥಿಕ ಸಬಲೀಕರಣಕ್ಕೆ ಸಹಕಾರಿಯಾಗಿವೆ- ಗ್ಯಾರಂಟಿ ಸಮಿತಿ ಅಧ್ಯಕ್ಷ ಎ.ಬಿ.ಕುಮಾರ್

On: December 9, 2025 10:24 PM
Follow us:
--विज्ञापन यहां--

Whatsapp Channel

Join Now

Telegram Group

Join Now
Spread the love

ಗ್ಯಾರಂಟಿ ಯೋಜನೆಗಳ ಬಡವರು ಮತ್ತು ಮಧ್ಯಮ ವರ್ಗದವರ ಆರ್ಥಿಕ ಸಬಲೀಕರಣಕ್ಕೆ ಸಹಕಾರಿಯಾಗಿವೆ- ಗ್ಯಾರಂಟಿ ಸಮಿತಿ ಅಧ್ಯಕ್ಷ ಎ.ಬಿ.ಕುಮಾರ್

ಕೆ.ಆರ್.ಪೇಟೆ: ನಮ್ಮ ಕರ್ನಾಟಕ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಪೈಕಿ ಅನ್ನಭಾಗ್ಯ ಯೋಜನೆಯ ಮೂಲಕ ಇದೇ ಜನವರಿ ತಿಂಗಳಿನಿಂದ ಅಕ್ಕಿ, ಬೇಳೆ, ಅಡಿಗೆ ಎಣ್ಣೆ ಸೇರಿದಂತೆ ಅಗತ್ಯ ವಸ್ತುಗಳನ್ನೊಳಗೊಂಡ ಇಂದಿರಾ ಕಿಟ್ ಅನ್ನು ಆಹಾರ ಇಲಾಖೆಯ ಮೂಲಕ ಅರ್ಹ ಬಿ.ಪಿ.ಎಲ್ ಹಾಗೂ ಅಂತ್ಯೋದಯ ಕಾರ್ಡ್ ಹೊಂದಿದ ಎಲ್ಲಸ ಫಲಾನುಭವಿಗಳಿಗೆ ವಿತರಣೆ ಮಾಡಲಾಗುವುದು ಎಂದು ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಗ್ರಹಾರಬಾಚಹಳ್ಳಿ ಎ.ಬಿ.ಕುಮಾರ್ ಹೇಳಿದರು.
ಅವರು ಕೆ.ಆರ್.ಪೇಟೆ ಪಟ್ಟಣದ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಗ್ಯಾರಂಟಿ ಯೋಜನೆಗಳು ಆರ್ಥಿಕ ಹಾಗೂ ಸಾಮಾಜಿಕ ಭದ್ರತೆಯನ್ನು ಒದಗಿಸುವುದರೊಂದಿಗೆ ಮಹಿಳೆಯರ ಸಬಲೀಕರಣಕ್ಕೆ ಒತ್ತು ನೀಡಿವೆ. ಇವುಗಳ ಮಹತ್ವವನ್ನು ಹೆಚ್ಚಿಸುವಲ್ಲಿ ಆಹಾರ ಭದ್ರತೆ, ಆರೋಗ್ಯ ಸೇವೆಗಳಿಗೆ ಪ್ರವೇಶ, ಉದ್ಯೋಗಾವಕಾಶ, ಆರ್ಥಿಕ ಸುಧಾರಣೆ ಮತ್ತು ಸಮಾನತೆಯನ್ನು ಹೆಚ್ಚಿಸಿವೆ‌
ಅನ್ನಭಾಗ್ಯ ಯೋಜನೆಯು ಬಡ
ಕುಟುಂಬಗಳಿಗೆ ಆಹಾರ ಧಾನ್ಯಗಳ ವೆಚ್ಚವನ್ನು ಕಡಿಮೆ ಮಾಡಿದೆ.
ಶಕ್ತಿ ಯೋಜನೆಯು ಮಹಿಳೆಯರ ಪ್ರಯಾಣ ವೆಚ್ಚವನ್ನು ಕಡಿಮೆ ಮಾಡಿದೆ. ಅವರ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಯನ್ನು ಸುಧಾರಿಸಿದೆ. ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಗಳು ಕುಟುಂಬಗಳ ಆರ್ಥಿಕ ಹೊರೆಯನ್ನು ಕಡಿಮೆ ಮಾಡಿದೆ ಅದೇ ಹಣವನ್ನು ಜನರು ಉಳಿತಾಯ ಮಾಡಿ ಆರೋಗ್ಯ ಸೇವೆಗಳಂತಹ ಇತರ ಅಗತ್ಯತೆಗಳಿಗೆ ಹಣ ಬಳಸಲು ಸಾಧ್ಯವಾಗಿದೆ. ಯುವನಿಧಿ ಯೋಜನೆಯು
ನಿರುದ್ಯೋಗಿ ಯುವಕರಿಗೆ ಭತ್ಯೆಯನ್ನು ನೀಡುತ್ತದೆ. ಇದು ಅವರ ನಿರುದ್ಯೋಗದ ಒತ್ತಡವನು, ಕಡಿಮೆ ಮಾಡಿದೆ.
ಯುವ ನಿಧಿಯ ಮೂಲಕ ಪಡೆಯುವ 3ಸಾವಿರ ಭತ್ಯೆಯು ಯುವಜನರಲ್ಲಿ ತಮ್ಮ ವಿದ್ಯಾಭ್ಯಾಸದ ಸಾಮರ್ಥ್ಯಕ್ಕೆ ತಕ್ಕಂತೆ ಉತ್ತಮ ಉತ್ತಮ ವೇತನ ನೀಡುವ ಒಳ್ಳೆಯ ಉದ್ಯೋಗವನ್ನು ಹುಡುಕಲು ಸಹಕಾರಿಯಾಗುತ್ತಿದೆ. ಹೀಗೆ ನಮ್ಮ ಐದೂ ಗ್ಯಾರಂಟಿ ಯೋಜನೆಗಳು ನಗರ ಮತ್ತು
ಗ್ರಾಮೀಣ ಪ್ರದೇಶಗಳ ಜನರ ನಡುವಿನ ಆರ್ಥಿಕ ಅಂತರವನ್ನು ಕಡಿಮೆ ಮಾಡಲು ಸಹಾಯಕವಾಗಿವೆ. ಐದು ಗ್ಯಾರಂಟಿ ಯೋಜನೆಗಳ ಯಶಸ್ವಿಯಾಗಿ ಅನುಷ್ಠಾನ ಗೊಳಿಸಲು ತಾಲ್ಲೂಕು ಮಟ್ಟ, ಜಿಲ್ಲಾ ಮಟ್ಟ ಹಾಗೂ ರಾಜ್ಯ ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯನ್ನು ರಚಿಸಲಾಗಿದೆ ಈ ಸಮಿತಿಯು ಪ್ರತಿ 15ದಿನಗಳಿಗೊಮ್ಮೆ ಪ್ರಗತಿ ಪರಿಶೀಲನೆ ನಡೆಸಿ ಯಶಸ್ವಿಯಾಗಿ ಯೋಜನೆಗಳನ್ನು ಅನುಷ್ಠಾನ ಗೊಳಿಸಲು ಕೆಕಸ ಮಾಡುತ್ತಿವೆ. ಇದೂವರೆವಿಗೂ ಐದೂ ಗ್ಯಾರಂಟಿ ಯೋಜನೆಗಳಿಗೂ ಒಟ್ಟು ಸುಮಾರು 1 ಲಕ್ಷ ಕೋಟಿಗೂ ಹೆಚ್ಚು ಅನುಧಾನವನ್ನು ರಾಜ್ಯ ಸರ್ಕಾರವು ನೀಡಿರುತ್ತದೆ. ಗ್ಯಾರಂಟಿ ಯೋಜನೆಗಳು ನಮ್ಮ ಬಡವರು ಮತ್ತು ಮಧ್ಯಮ ವರ್ಗದವರ ದಿನ ನಿತ್ಯ ಜೀವನಕ್ಕೆ ಆಸರೆಯಾಗಿವೆ ಎಂದು ಎ.ಬಿ.ಕುಮಾರ್ ತಿಳಿಸಿದರು.
ಸಭೆಯಲ್ಲಿ
ತಾಲ್ಲೂಕು ಆಹಾರ ಇಲಾಖೆಯ ಶಿರಸ್ತೇದಾರ್ ನಟರಾಜ್, ಚೆಸ್ಕಾಂ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಪುಟ್ಟಸ್ವಾಮೀಗೌಡ, ತಾಲ್ಲೂಕು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಿಡಿಪಿಓ ವಿದ್ಯಾವತಿ, ಜಿಲ್ಲಾ ಉದ್ಯೋಗಾಧಿಕಾರಿ ವಿ.ನವೀನ್‌ಕುಮಾರ್, ಡಿಪೋ ಟ್ರಾಪಿಕ್ ಇನ್ಸ್ ಪೆಕ್ಟರ್ ಗವಿಸಿದ್ದಪ್ಪ ಅವರು ತಮ್ಮ ತಮ್ಮ ಇಲಾಖೆಯ ಪ್ರಗತಿಯ ವರದಿಯನ್ನು ಮಂಡಿಸಿದರು.
ಸಭೆಯಲ್ಲಿ ತಾಲೂಕು ಪಂಚಾಯ್ತಿ ಸಹಾಯಕ ಲೆಕ್ಕಾಧಿಕಾರಿ ಶಂಕರ್, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯರಾದ ಬೊಮ್ಮೇನಹಳ್ಳಿ ಲತಾಹರೀಶ್, ಕನಕದಾಸನಗರ ಶಿವಮ್ಮ, ಕೆ.ಎಸ್.ಆರ್.ಟಿ.ಸಿ ಶಿವಣ್ಣ, ಸಿಂಗನಹಳ್ಳಿ ಗೋಪಾಲ್, ಸಿ.ಆರ್.ಪಿ.ಕುಮಾರ್, ಬೂಕನಕೆರೆ ರೂಪಾಚಂದ್ರಶೇಖರ್, ಬಂಡಿಹೊಳೆ ಯೋಗೇಶ್(ಉಮೇಶ್), ಹಾಫೀಜ್ ಉಲ್ಲಾ, ಗೋವಿಂದನಹಳ್ಳಿ ಶ್ಯಾಮಣ್ಣ, ಬೂಕನಕೆರೆ ಬಿ.ಸಿ.ಮಾಧು, ದೊಡ್ಡತಾರಹಳ್ಳಿ ಸೋಮಶೇಖರ್, ಶಿವಲಿಂಗಪ್ಪ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ವಿಷಯ ನಿರ್ವಾಹಕಿ ನಂದಿನಿ ಇತರರು ಉಪಸ್ಥಿತರಿದ್ದರು