ಕೋರಮಂಗಲ ಗ್ರಾಮ ಪಂಚಾಯತಿ ನೂತನ ಅಧ್ಯಕ್ಷರಾಗಿ ಕೆ.ಚನ್ನೇಗೌಡ ಮತ್ತು ಉಪಾಧ್ಯಕ್ಷರಾಗಿ ಕನಕರತ್ನಮ್ಮ ಅವಿರೋಧ ಆಯ್ಕೆ
ಗ್ರಾಮದ ಕುಂದು ಕೊರತೆಗಳನ್ನು ಬಗೆಹರಿಸಲಾಗುವುದು:
ಅಧ್ಯಕ್ಷ ಕೆ.ಚನ್ನೇಗೌಡ
ವಿಜಯಪುರ: ಹೋಬಳಿಯ ಕೋರಮಂಗಲ ಗ್ರಾಮ ಪಂಚಾಯತಿಯ ನೂತನ ಅಧ್ಯಕ್ಷರಾಗಿ ಕೆ.ಚನ್ನೇಗೌಡ ಮತ್ತು ಉಪಾಧ್ಯಕ್ಷರಾಗಿ ಕನಕರತ್ನಮ್ಮ ಅವಿರೋಧ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿ ಧನಂಜಯ್ ಘೋಷಿಸಿದರು.
ಒಟ್ಟು ಗ್ರಾಮ ಪಂಚಾಯತಿ ಸದಸ್ಯರು 10 ಅದರಲ್ಲಿ 7 ಜನ ಸದಸ್ಯರು ಹಾಜರಾಗಿದ್ದು,ಮೂರು ಸದಸ್ಯರು ಗೈರು ಹಾಜರಾಗಿದ್ದರು.
ಈ ವೇಳೆಯಲ್ಲಿ ಕೆಪಿಸಿಸಿ ಸದಸ್ಯ ಚಿನ್ನಪ್ಪ ಮಾತನಾಡಿ ಪಂಚಾಯತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳ ಕುಂದು ಕೊರತೆಗಳನ್ನು ಗುರುತಿಸಿ ಬಗೆಹರಿಸುವ ನಿಟ್ಟಿನಲ್ಲಿ ಎಲ್ಲಾ ಸದಸ್ಯರು ಒಗ್ಗೂಡಿ ಶ್ರಮಿಸಬೇಕು ಹಾಗೂ ಬೆಂಬಲ ನೀಡಿರುವವರ ನಂಭಿಕೆಗೆ ಋಣಿಯಾಗಿರುವಂತೆ ಕಾರ್ಯ ನಿರ್ವಹಿಸಿ ಎಂದು ಶುಭ ಹಾರೈಸಿದರು.
ನೂತನ ಅಧ್ಯಕ್ಷ ಕೆ.ಚನ್ನೇಗೌಡ ಮಾತನಾಡಿ
ಎಲ್ಲಾ ಸದಸ್ಯರನ್ನು ವಿಶ್ವಾಸದಲ್ಲಿಟ್ಟುಕೊಂಡು ಪಂಚಾಯತಿ ವ್ಯಾಪ್ತಿಯ ಪ್ರತಿಯೊಂದು ಗ್ರಾಮದ ಸ್ವಚ್ಛತೆ ಹಾಗೂ ಮೂಲಭೂತ ಸೌಕರ್ಯಗಳಿಗೆ ಮೊದಲ ಆದ್ಯತೆ ನೀಡಿ ಕಾರ್ಯ ನಿರ್ವಹಿಸುವೆ ಎಂಬ ಆತ್ಮವಿಶ್ವಾಸವನ್ನು ವ್ಯಕ್ತಪಡಿಸಿದರು.
ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ತಾಲೂಕಿನ ಹಲವು ಮುಖಂಡರು ಅಭಿನಂದಿಸಿದರು.





