--ಜಾಹೀರಾತು--

ಜಾನುವಾರು ಜಾತ್ರೆಗೆ ಆಗಮಿಸುವ ರೈತರಿಗೆ ಘಾಟಿ ಪ್ರಾಧಿಕಾರದ ವತಿಯಿಂದ ಉಚಿತ ತಿಂಡಿ ಊಟದ ವ್ಯವಸ್ಥೆ

On: December 10, 2025 10:21 PM
Follow us:
--विज्ञापन यहां--

Whatsapp Channel

Join Now

Telegram Group

Join Now
Spread the love

ಜಾನುವಾರು ಜಾತ್ರೆಗೆ ಆಗಮಿಸುವ ರೈತರಿಗೆ ಘಾಟಿ ಪ್ರಾಧಿಕಾರದ ವತಿಯಿಂದ ಉಚಿತ ತಿಂಡಿ ಊಟದ ವ್ಯವಸ್ಥೆ

ದೊಡ್ಡಬಳ್ಳಾಪುರ :ಶ್ರೀ ಫಾಟಿ ಸುಬ್ರಹ್ಮಣ್ಯ ರಾಸುಗಳ ಜಾತ್ರೆಗೆ ಈಗಾಗಲೇ ರೈತರು ತಮ್ಮ ಜಾನುವಾರುಗಳ ನ್ನು ಮಾರಾಟಕ್ಕಾಗಿ ಆಗಮಿಸಿದ್ದಾರೆ. ಜಾತ್ರೆಗೆ ಆಗಮಿಸಿರುವ ರೈತರಿಗೆ ಹಾಗೂ ಸಾರ್ವಜನಿಕರಿಗೆ ದೇವಾಲಯದ ವತಿಯಿಂದ ಉಚಿತವಾಗಿ ಬೆಳಿಗ್ಗೆ ತಿಂಡಿ ಮತ್ತು ಮಧ್ಯಾಹ್ನ ಊಟದ ವ್ಯವಸ್ಥೆಯನ್ನು ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಕಲ್ಪಿಸಲಾಯಿತು.ಜಾನುವಾರುಗಳ ಜಾತ್ರೆ ಮುಗಿಯುವ ವರೆಗೂ ಜಾತ್ರೆಯಲ್ಲಿ ಉಪಸ್ಥಿತರಿರುವ ಎಲ್ಲಾ ರೈತರಿಗೂ ಹಾಗೂ ಸಾರ್ವಜನಿಕರಿಗೂ ಬೆಳಿಗ್ಯೆ ಮತ್ತೆ ಮದ್ಯಾನ್ಹ ಉಪಹಾರ ಮತ್ತು ಊಟದ ವ್ಯವಸ್ಥೆ ಇರುತ್ತದೆ ಎಂದು ಪ್ರಾಧಿಕಾರ ಪ್ರಕಟಣೆಯಲ್ಲಿ ತಿಳಿಸಿದೆ.