--ಜಾಹೀರಾತು--

ಚಿಕ್ಕಲ್ಲೂರು ಜಾತ್ರೆ : ಭಕ್ತಾಧಿಗಳಿಗೆ ಅಗತ್ಯ ಮೂಲ ಸೌಕರ್ಯಕ್ಕೆ ಸಿದ್ದತೆ ಕೈಗೊಳ್ಳಲು ಶಾಸಕರಾದ ಎಂ.ಆರ್. ಮಂಜುನಾಥ್, ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಸೂಚನೆ

On: December 12, 2025 8:00 PM
Follow us:
--विज्ञापन यहां--

Whatsapp Channel

Join Now

Telegram Group

Join Now
Spread the love

ಚಿಕ್ಕಲ್ಲೂರು ಜಾತ್ರೆ : ಭಕ್ತಾಧಿಗಳಿಗೆ ಅಗತ್ಯ ಮೂಲ ಸೌಕರ್ಯಕ್ಕೆ ಸಿದ್ದತೆ ಕೈಗೊಳ್ಳಲು ಶಾಸಕರಾದ ಎಂ.ಆರ್. ಮಂಜುನಾಥ್, ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಸೂಚನೆ

ಚಾಮರಾಜನಗರ: ಜಿಲ್ಲೆಯ ಪ್ರಮುಖ ಯಾತ್ರಾ ಕ್ಷೇತ್ರ ಚಿಕ್ಕಲ್ಲೂರಿನಲ್ಲಿ ಜನವರಿ 3 ರಿಂದ 7ರ ವರೆಗೆ ನಡೆಯಲಿರುವ ಜಾತ್ರಾ ಮಹೋತ್ಸವಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಮೂಲ ಸೌಕರ್ಯಗಳನ್ನು ಒದಗಿಸಲು ಅಗತ್ಯ ಸಿದ್ದತೆ ಕೈಗೊಳ್ಳುವಂತೆ ಶಾಸಕರಾದ ಎಂ.ಆರ್. ಮಂಜುನಾಥ್ ಹಾಗೂ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೊಳ್ಳೇಗಾಲ ತಾಲೂಕಿನ ಚಿಕ್ಕಲ್ಲೂರು ಕ್ಷೇತ್ರದ ಸಿದ್ದಾಪ್ಪಾಜಿ ದೇವಸ್ಥಾನದ ಆವರಣದ ಪಕ್ಕದಲ್ಲಿ ಚಿಕ್ಕಲ್ಲೂರು ಜಾತ್ರಾ ಮಹೋತ್ಸವ ಸಂಬಂಧ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಚಿಕ್ಕಲ್ಲೂರು ಜಾತ್ರೆಯು 5 ದಿನಗಳ ಕಾಲ ನಡೆಯಲಿದೆ. ಪ್ರತಿವರ್ಷ ಲಕ್ಷಾಂತರ ಭಕ್ತರು ಕ್ಷೇತ್ರಕ್ಕೆ ಜಾತ್ರಾ ಸಂದರ್ಭದಲ್ಲಿ ಭೇಟಿ ನೀಡುತ್ತಾರೆ. ಹೆಚ್ಚು ಸಂಖ್ಯೆಯಲ್ಲಿ ಸೇರುವ ಭಕ್ತಾಧಿಗಳಿಗೆ ಮೂಲ ಸೌಲಭ್ಯಗಳಿಗೆ ಕೊರತೆಯಾಗದಂತೆ ಎಲ್ಲ ವ್ಯವಸ್ಥೆಗಳನ್ನು ಸಮರ್ಪಕವಾಗಿ ಕಲ್ಪಿಸಬೇಕಿದೆ. ಈ ನಿಟ್ಟಿನಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ತ್ವರಿತವಾಗಿ ಸಿದ್ದತೆಗೆ ಮುಂದಾಗಬೇಕು ಎಂದು ಶಾಸಕರು, ಜಿಲ್ಲಾಧಿಕಾರಿಯವರು ತಿಳಿಸಿದರು.

ಶಾಸಕರಾದ ಎಂ.ಆರ್. ಮಂಜುನಾಥ್ ಅವರು ಮಾತನಾಡಿ ಭಕ್ತಾಧಿಗಳಿಗೆ ಸರಬರಾಜು ಮಾಡುವ ಕುಡಿಯುವ ನೀರಿನ ಶುದ್ದತೆಯನ್ನ ಪರೀಕ್ಷಿಸಿಕೊಳ್ಳಬೇಕು. ಜಾತ್ರಾ ಸಂದರ್ಭದಲ್ಲಿ ತಾತ್ಕಾಲಿಕವಾಗಿ ಉಪಹಾರ ಹೋಟೆಲ್‍ಗಳನ್ನು ತೆರೆಯುವವರಿಗೆ ಶುಚಿತ್ವ ಕಾಪಾಡಿಕೊಳ್ಳುವಂತೆ ಸೂಚಿಸಬೇಕು. ಪರಿಕರಗಳು, ಕುಡಿಯುವ ನೀರು, ಶುದ್ದತೆಯಿಂದ ಇರುವಂತೆ ತಿಳಿಸಬೇಕು. ಕಟ್ಟುನಿಟ್ಟಾಗಿ ಆರೋಗ್ಯ ಪೂರಕ ಕ್ರಮಗಳನ್ನು ವಹಿಸುವಂತೆ ಪರವಾನಗಿ ನೀಡುವ ಹಂತದಲ್ಲಿಯೇ ಹೇಳಬೇಕು ಎಂದರು.

ಕ್ಷೇತ್ರ ಸಂಪರ್ಕಿಸುವ ಗ್ರಾಮಗಳಲ್ಲಿ ರಸ್ತೆ ಅಭಿವೃದ್ದಿ ಕಾರ್ಯ ನಡೆಯುತ್ತಿದೆ. ಈಗಾಗಲೇ ಕೆಲವೆಡೆ ಡಾಂಬರೀಕರಣ ಆಗುತ್ತಿದೆ. ಇನ್ನೂ 6 ಕಿ.ಮೀ ರಸ್ತೆಯು ಆಗಲಿದೆ. ಹಂತ ಹಂತವಾಗಿ ಇನ್ನೂ 6 ತಿಂಗಳಲ್ಲಿ ಎಲ್ಲ ರಸ್ತೆ ನಿರ್ಮಾಣ ಕಾರ್ಯ ಪೂರ್ಣವಾಗಲಿದೆ. ಆದರೂ ಜಾತ್ರಾ ಸಂದರ್ಭದಲ್ಲಿ ಭಕ್ತಾಧಿಗಳಿಗೆ ತೊಂದರೆಯಾಗದಂತೆ ರಸ್ತೆ ಸರಿಪಡಿಸುವ ಕೆಲಸ ಮಾಡಲು ಸೂಚಿಸಲಾಗುತ್ತದೆ ಎಂದು ತಿಳಿಸಿದರು.

ಚಿಕ್ಕಲ್ಲೂರು ಕ್ಷೇತ್ರಕ್ಕೆ ಸಾಕಷ್ಟು ಸಂಖ್ಯೆಯಲ್ಲಿ ವರ್ಷವಿಡೀ ಭಕ್ತರು ಭೇಟಿ ಕೊಡುತ್ತಿದ್ದಾರೆ. ಇವರಿಗೆ ಮೂಲ ಸೌಕರ್ಯಗಳ ವ್ಯವಸ್ಥೆಯನ್ನು ಶಾಶ್ವತವಾಗಿ ಕಲ್ಪಿಸಲು ಮಾಸ್ಟರ್ ಪ್ಲಾನ್ ಆಗಬೇಕಿದೆ. ಜಾತ್ರೆ ಮುಗಿದ ನಂತರ ಕ್ಷೇತ್ರದ ಸಮಗ್ರ ಅಭಿವೃದ್ದಿ ಸಂಬಂಧ ಸಭೆ ನಡೆಸಿ ತೀರ್ಮಾನ ತೆಗೆದುಕೊಳ್ಳೋಣ. ಪ್ರಸ್ತುತ ಬರಲಿರುವ ಜತ್ರೆಗೆ ಯಾವುದೇ ತೊಂದರೆಯಾಗದಂತೆ ಎಲ್ಲ ಸೌಕರ್ಯಗಳನ್ನು ಕಲ್ಪಿಸೋಣ ಎಂದು ಶಾಸಕರಾದ ಎಂ.ಆರ್. ಮಂಜುನಾಥ್ ಅವರು ತಿಳಿಸಿದರು.

ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಮಾತನಾಡಿ ಜಾತ್ರಾ ಸಂದರ್ಭದಲ್ಲಿ ವಿದ್ಯುತ್ ಸೇವೆ ನಿರಂತರವಾಗಿರಬೇಕು. ಮುಂಜಾಗ್ರತಾ ಕ್ರಮಗಳನ್ನು ವಹಿಸಲು ತಂಡ ನಿಯೋಜನೆ ಮಾಡಬೇಕು. ಭಕ್ತಾಧಿಗಳ ಸಂಖ್ಯೆಗೆ ಅನುಗುಣವಾಗಿ ಕೆ.ಎಸ್.ಆರ್.ಟಿ.ಸಿ ವತಿಯಿಂದ ಹೆಚ್ಚು ಬಸ್‍ಗಳ ನಿಯೋಜನೆ ಮಾಡಬೇಕು. ಜಾತ್ರೆ ಅವಧಿಯಲ್ಲಿ ತಾತ್ಕಾಲಿಕ ಆರೋಗ್ಯ ಕೇಂದ್ರ ತೆರೆದು ವೈದ್ಯರು ಸಿಬ್ಬಂದಿಯನ್ನು ನಿಯೋಜಿಸಬೇಕು ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಅವರು ಮಾತನಾಡಿ ಪಂಚಾಯಿತಿ ವತಿಯಿಂದ ಕುಡಿಯುವ ನೀರು ಪೂರೈಕೆ ನಿರ್ವಹಣೆ, ಅಂಗಡಿ ಮಳಿಗೆಗಳು, ವಾಹನಗಳ ನಿಲುಗಡೆ ಸಂಬಂಧ ನಿಯಮಾನುಸಾರ ಟೆಂಡರ್ ಗೆ ಕ್ರಮ ವಹಿಸಲಾಗುತ್ತದೆ. ಪಂಚಾಯಿತಿ ವತಿಯಿಂದ ಕೈಗೊಳ್ಳಬೇಕಿರುವ ಎಲ್ಲ ಕೆಲಸಗಳಿಗೆ ಅಧಿಕಾರಿಗಳಿಗೆ ಜವಾಬ್ದಾರಿ ವಹಿಸಲಾಗುತ್ತದೆ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ. ಕವಿತಾ ಅವರು ಮಾತನಾಡಿ ಜಾತ್ರಾ ಸಂದರ್ಭದಲ್ಲಿ ಹೆಚ್ಚು ಜನರು ಸೇರುವುದರಿಂದ ಅಗತ್ಯ ಸಂಖ್ಯೆಯಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗುವುದು. ವಾಹನಗಳ ಸಂಚಾರ, ವಾಹನಗಳ ನಿಲುಗಡೆಗೆ ಸೂಕ್ತ ಕ್ರಮಗಳನ್ನು ವಹಿಸಲಾಗುವುದು ಎಂದರು.

ಶ್ರೀ ಮಠದ ಭರತರಾಜೇ ಅರಸ್, ಮುಖಂಡರಾದ ಉಗ್ರನರಂಸಿಹೇಗೌಡ, ಗ್ರಾಮದ ಇನ್ನಿತರ ಮುಖಂಡರು ಮಾತನಾಡಿದರು.

ಕೊಳ್ಳೇಗಾಲ ತಹಶೀಲ್ದಾರ್ ಬಸವರಾಜು, ಹನೂರು ತಹಶೀಲ್ದಾರ್ ಚೈತ್ರ, ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ವರದಿ: ಆರ್ ಉಮೇಶ್ ಮಲಾರಪಾಳ್ಯ