ಘಾಟಿ ಸುಬ್ರಮಣ್ಯ ಕ್ಷೇತ್ರಕ್ಕೆ ಸಚಿವ ಕೆ.ಎಚ್.ಮುನಿಯಪ್ಪ ಬೇಟಿ– ಜಾತ್ರಾ ಮಹೋತ್ಸವಕ್ಕೆ ಚಾಲನೆ
ದೊಡ್ಡಬಳ್ಳಾಪುರ:ಮಾನ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆಹೆಚ್. ಮುನಿಯಪ್ಪ ರವರು ಇಂದು ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಸ್ವಾಮಿ ದೇವಸ್ಥಾನಕ್ಕೆ ಬೇಟಿ ನೀಡಿ ದೇವರ ವಿಶೇಷ ದರ್ಶನವನ್ನು ಪಡೆದರು ನಂತರ ಜಾನುವಾರಗಳ ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ರಾಜಣ್ಣ, ದೇವಸ್ಥಾನ ಪ್ರಾಧಿಕಾರದ ಸದಸ್ಯರಾದ ರಂಗಪ್ಪ,ಮಹೇಶ್, ರವಿ ಸಿದ್ದಪ್ಪ,ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರಾದ ಶ್ರೀನಿವಾಸ್ ,ಮಹೇಶ್ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.





