ಬೋನಿಗೆ ಬಿದ್ದ ಚಿರತೆ
ದೊಡ್ಡಬಳ್ಳಾಪುರ:ತಾಲ್ಲೂಕಿನ
ಸಾಸಲು ಹೋಬಳಿ ಆರೂಡಿ ಗ್ರಾಮದಲ್ಲಿ ಜನರಿಗೆ ನಿದ್ದೆಗೆಡಿಸಿದ್ದ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಡಿ.13 ರ ಶನಿವಾರ ರಾತ್ರಿ ಬೋನಿನಲ್ಲಿ ಚಿರತೆ ಸೆರೆಯಾಗಿರುವುದು ಕಂಡುಬಂದಿದ್ದು, ಈ ಹಿನ್ನೆಲೆ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.
ತಾಲ್ಲೂಕಿನ ಹಾರೋನಹಳ್ಳಿ ಗ್ರಾಮದಲ್ಲಿ ಚಿರತೆಯ ಉಪಟಳ ಹೆಚ್ಚಾಗಿತ್ತು. ಮೇಕೆ, ನಾಯಿಗಳ ಮೇಲೆ ದಾಳಿ ನಡೆಸಿ ಬಲಿ ಪಡೆದಿತ್ತು. ಇದರಿಂದ ಗ್ರಾಮಸ್ಥರು ಭಯ ಭೀತರಾಗಿದ್ದರು.
ಈ ಕುರಿತು ಗ್ರಾಮದ ಮುಖಂಡ, ಆರೂಡಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಶ್ರೀಧರ್ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು.
ಕೂಡಲೇ ಅರಣ್ಯ ಅಧಿಕಾರಿಗಳು ಶನಿವಾರ ಸಂಜೆಯ ವೇಳೆಗೆ ಬೋನ್ ಅಳವಡಿಸಿದ್ದರು. ಬೋನು ಇರಿಸಿದ ಒಂದೇ ದಿನಕ್ಕೆ ಚಿರತೆ ಬೋನಿಗೆ ಬಿದ್ದಿದೆ.





