--ಜಾಹೀರಾತು--

ಕಬ್ಬಡಿ ಚಾಂಪಿಯನ್ಶಿಪ್ ನಲ್ಲಿ ಕಂಚಿನ ಪದಕ ಪಡೆದ ದೊಡ್ಡಬಳ್ಳಾಪುರದ ಪ್ರತಿಭೆ

On: December 15, 2025 9:41 PM
Follow us:
--विज्ञापन यहां--

Whatsapp Channel

Join Now

Telegram Group

Join Now
Spread the love

ಕಬ್ಬಡಿ ಚಾಂಪಿಯನ್ಶಿಪ್ ನಲ್ಲಿ ಕಂಚಿನ ಪದಕ ಪಡೆದ ದೊಡ್ಡಬಳ್ಳಾಪುರದ ಪ್ರತಿಭೆ

ದೊಡ್ಡಬಳ್ಳಾಪುರ:ಅಮೆಚೂರ್ ಕಬಡ್ಡಿ ಫೆಡರೇಶನ್ ಆಫ್ ಇಂಡಿಯಾ ವತಿಯಿಂದ ಮಹಾರಾಷ್ಟ್ರದ ನಡೆದ ಜಾಲ್ಗೊಂನ್ ನಲ್ಲಿ ನಡೆದ 5ನೇ ಫೆಡರೇಶನ್ ಕಪ್ ನ್ಯಾಷನಲ್ ಕಬ್ಬಡಿ ಚಾಂಪಿಯನ್ಶಿಪ್ ನಲ್ಲಿ ಭಾಗವಹಿಸಿ ಕಂಚಿನ ಪದಕ ವಿಜೇತರಾದ ಹರೀಶ್ ರವರಿಗೆ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಪ್ರಚಾರ ಸಂಸ್ಥೆಯ ರಾಜ್ಯಾಧ್ಯಕ್ಷ ಎಚ್. ರಾಘವೇಂದ್ರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಎಚ್. ಶಿವಕುಮಾರ್ ಅಭಿನಂದನೆ ಸಲ್ಲಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾಹಿತಿ ಹಂಚಿಕೊಂಡಿರುವ ರಾಘವೇಂದ್ರ ರವರು ಮಾತನಾಡಿ ಅವಿಘ್ನ ಕಬ್ಬಡಿ ಕ್ಲಬ್ ನ ಹರೀಶ್ ರವರು ಮಹಾರಾಷ್ಟ್ರದಲ್ಲಿ ನಡೆದ 5ನೇ ಫೆಡರೇಶನ್ ಕಪ್ ನ್ಯಾಷನಲ್ ಕಬ್ಬಡಿ ಚಾಂಪಿಯನ್ಶಿಪ್ ನಲ್ಲಿ ಭಾಗವಹಿಸಿ ಕಂಚಿನ ಪದಕ ಸಾದಿಸಿದ್ದು, ರಾಜ್ಯಕ್ಕೆ ಹೆಮ್ಮೆಯ ಸಂಗತಿಯಾಗಿದೆ ಅಲ್ಲದೇ ಕಬ್ಬಡ್ಡಿ ಕ್ರೀಡೆಯಲ್ಲಿ ತೊಡಗಿರುವ ಎಷ್ಟು ಯುವ ಪ್ರತಿಭೆಗಳಿಗೆ ಈ ಸಾಧನೆ ಸ್ಪೂರ್ತಿದಾಯಕವಾಗಲಿದೆ ಎಂದು ತಿಳಿಸಿದ್ದಾರೆ.

ಮುಂದಿನ ದಿನಗಳಲ್ಲಿ ನಮ್ಮ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಪ್ರಚಾರ ಸಂಸ್ಥೆ ವತಿಯಿಂದ ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ಸಾಧನೆಮಾಡಿದ ಕ್ರೀಡಾಪಟುಗಳಿಗೆ ವಿಶೇಷವಾಗಿ ಸನ್ಮಾನಿಸಿ ಗೌರವಿಸಲಾಗುವುದು ಅಲ್ಲದೇ ಕ್ರೀಡಾಸಕ್ತ ಯುವ ಪ್ರತಿಭೆಗಳಿಗೆ ವಿಶೇಷ ಕ್ರೀಡಾ ಕೂಟಗಳನ್ನು ಆಯೋಜಿಸುವ ಮೂಲಕ ಪ್ರೋತ್ಸಾಹಿಸಲಾಗುವುದು ಎಂದು ತಿಳಿಸಿದರು.