--ಜಾಹೀರಾತು--

*ಭಾರತ ಸರ್ಕಾರದ ಉಕ್ಕು ಮತ್ತು ಭಾರೀ ಕೈಗಾರಿಕಾ ಸಚಿವರು ಹಾಗೂ ಕರ್ನಾಟಕ ಸರ್ಕಾರದ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಮತ್ತು ಮಾಜಿ ಸಚಿವ ಹೆಚ್.ಡಿ.ರೇವಣ್ಣ ಹುಟ್ಟು ಹಬ್ಬದ ಅಂಗವಾಗಿ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಜೆಡಿಎಸ್ ಕಾರ್ಯಕರ್ತರಿಂದ ಹಣ್ಣು ಹಂಪಲು ವಿತರಣೆ*

On: December 16, 2025 6:56 PM
Follow us:
--विज्ञापन यहां--

Whatsapp Channel

Join Now

Telegram Group

Join Now
Spread the love

*ಭಾರತ ಸರ್ಕಾರದ ಉಕ್ಕು ಮತ್ತು ಭಾರೀ ಕೈಗಾರಿಕಾ ಸಚಿವರು ಹಾಗೂ ಕರ್ನಾಟಕ ಸರ್ಕಾರದ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಮತ್ತು ಮಾಜಿ ಸಚಿವ ಹೆಚ್.ಡಿ.ರೇವಣ್ಣ ಹುಟ್ಟು ಹಬ್ಬದ ಅಂಗವಾಗಿ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಜೆಡಿಎಸ್ ಕಾರ್ಯಕರ್ತರಿಂದ ಹಣ್ಣು ಹಂಪಲು ವಿತರಣೆ*

ಕೆ.ಆರ್.ಪೇಟೆ,ಡಿ.16: ಭಾರತ ಸರ್ಕಾರದ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರು ಹಾಗೂ ಕರ್ನಾಟಕ ಸರ್ಕಾರದ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಮತ್ತು ಮಾಜಿ ಸಚಿವರಾದ ಹೆಚ್.ಡಿ.ರೇವಣ್ಣ ಅವರ ಹುಟ್ಟು ಹಬ್ಬದ ಅಂಗವಾಗಿ ತಾಲ್ಲೂಕು ಜೆಡಿಎಸ್ ಕಾರ್ಯಕರ್ತರು ಪಟ್ಟಣದ ದುಂಡಶೆಟ್ಟಿ-ಲಕ್ಷ್ಮಮ್ಮ ಸ್ಮಾರಕ ತಾಲ್ಲೂಕು ಸರ್ಕಾರಿ ಆಸ್ಪತ್ರೆಯ ಎಲ್ಲಾ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡಿ ಬೇಗ ಗುಣಮುಖರಾಗುವಂತೆ ಹಾರೈಸಿದರು.
ತಾಲ್ಲೂಕು ಟಿಎಪಿಸಿಎಂಎಸ್ ಸಂಸ್ಥೆಯ ಅಧ್ಯಕ್ಷ ಬಲದೇವ್, ತಾಲ್ಲೂಕು ಟಿಎಪಿಸಿಎಂಎಸ್ ಸಂಸ್ಥೆಯ ನಿರ್ದೇಶಕರಾದ ಹೆಚ್.ಟಿ.ಲೋಕೇಶ್, ಮಲ್ಲೇನಹಳ್ಳಿ ಮೋಹನ್, ನಾಗರಘಟ್ಟ ದಿಲೀಪ್‌ಕುಮಾರ್, ಕೆ.ಬಿ.ನಾಗೇಶ್, ತಾಲ್ಲೂಕು ಜೆಡಿಎಸ್ ಪಕ್ಷದ ಹಿರಿಯ ಮುಖಂಡರು ಹಾಗೂ ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಮೆಣಸ ವಿ.ಎನ್.ಮಹಾದೇವೇಗೌಡ, ತಾಲ್ಲೂಕು ಜೆಡಿಎಸ್ ಕಾನೂನು ಘಟಕದ ಅಧ್ಯಕ್ಷರು ಹಾಗೂ ತಾಲ್ಲೂಕು ವೀರಶೈವ ಲಿಂಗಾಯಿತ ಮಹಾಸಭಾ ಮಾಜಿ ಅಧ್ಯಕ್ಷ ವಿ.ಎಸ್.ಧನಂಜಯ್‌ಕುಮಾರ್, ಎಪಿಎಂಸಿ ಮಾಜಿ ಅಧ್ಯಕ್ಷ ಐನೋರಹಳ್ಳಿ ಮಲ್ಲೇಶ್, ತಾಲ್ಲೂಕು ಯುವ ಜೆಡಿಎಸ್ ಅಧ್ಯಕ್ಷ ವಡ್ಡರಹಳ್ಳಿ ಮಹಾದೇವ್, ಡಿ.ಸಿ.ಸಿ ಬ್ಯಾಂಕ್ ಮಾಜಿ ನಿರ್ದೇಶಕ ತೋಟಪ್ಪಶೆಟ್ಟಿ, ಮತ್ತಿತರರ ನೇತೃತ್ವದಲ್ಲಿ ಆಸ್ಪತ್ರೆಯ ಎಲ್ಲಾ ಒಳರೋಗಿಗಳಿಗೆ ಹಣ್ಣು-ಹಂಪಲು ವಿತರಣೆ ಮಾಡಿ ಮಾತನಾಡಿದ ಮುಖಂಡರು 2006ರಲ್ಲಿ, 2018ರಲ್ಲಿ ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ ಎಚ್.ಡಿ.ಕುಮಾರಸ್ವಾಮಿಯವರು ಸುವರ್ಣಾಕ್ಷರದಲ್ಲಿ ಬರೆದಿಡುವಂತಹ ಆಡಳಿತ ನೀಡಿದರು. ಪ್ರಪ್ರಥಮ ಭಾರಿಗೆ 2006ರಲ್ಲಿ ಮೈತ್ರಿ ಸರ್ಕಾರದ ಮುಖ್ಯಮಂತ್ರಿಯಾಗಿದ್ದ ವೇಳೆ ಬಡವರು ಮತ್ತು ಕೂಲಿಕಾರ್ಮಿಕರ ಜನರ ರಕ್ತ ಹೀರುತ್ತಿದ್ದ ಲಾಟರಿ ಮತ್ತು ಸಾರಾಯಿಯನ್ನು ನಿಷೇಧ ಮಾಡುವ ಮೂಲಕ ಲಕ್ಷಾಂತರ ಕೂಲಿ ಕಾರ್ಮಿಕರ ಜೀವನನ್ನು ಉಳಿಸಿದ್ದಾರೆ. ಹೆಣ್ಣು ಮಕ್ಕಳಿಗೆ ಭಾಗ್ಯಲಕ್ಷ್ಮೀ ಯೋಜನೆ ಜಾರಿ ಮಾಡಿ ಹೆಣ್ಣು ಮಗು ಎಂದು ಮೂಗು ಮುರಿಯುತ್ತಿದ್ದ ಮನೆಯಲ್ಲಿ ಸಂತಸ ಅರಳುವಂತೆ ಮಾಡಿದರು. ಪ್ರೌಢಶಾಲೆಯ ಮಕ್ಕಳಿಗೆ ಬೈಸಿಕಲ್ ಯೋಜನೆ ಜಾರಿಗೆ ತಂದು ಹೆಣ್ಣು ಮಕ್ಕಳಿಗೆ ಪ್ರೌಢ ಶಿಕ್ಷಣ ದೊರೆಯುವಂತೆ ನೋಡಿಕೊಂಡರು. ಎರಡನೇ ಭಾರಿಗೆ 2018ರಲ್ಲಿ ಮತ್ತೊಮ್ಮೆ ಸಿಎಂ ಆಗಿ ರಾಜ್ಯದ ಸುಮಾರು 25ಲಕ್ಷ ರೈತರ 45ಸಾವಿರ ಕೋಟಿ ಸಾಲವನ್ನು ಮನ್ನಾ ಮಾಡುವ ಮೂಲಕ ರೈತರ ಬಾಳಿಕೆ ಬೆಳಕು ನೀಡಿದರು. ಈಗ ಪ್ರಧಾನಿ ನರೇಂದ್ರಮೋದಿ ನೇತೃತ್ವದ ಸರ್ಕಾರದಲ್ಲಿ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರಾದ ಉತ್ತಮ ಕೆಲಸಗಳನ್ನು ಮಾಡುತ್ತಿದ್ದಾರೆ. ಪ್ರತಿಷ್ಠಿತ ಎಚ್.ಎಂ.ಟಿ, ಭದ್ರಾವತಿ ಕಬ್ಬಿಣದ ಕಾರ್ಖಾನೆ ಸೇರಿದಂತೆ ಹಲವು ಕಾರ್ಖಾನೆಗಳ ಪುನಶ್ಚೇತನಕ್ಕೆ ಕಾರ್ಯನಿರತರಾಗಿದ್ದಾರೆ. ಅಲ್ಲದೆ ಮಂಡ್ಯದ ಮೈಷುಗರ್ ಕಾರ್ಖಾನೆಯ ಅಭಿವೃದ್ಧಿ ಕೈಜೋಡಿಸಲು ಮುಂದಾಗಿದ್ದಾರೆ. ಹೀಗೆ ಕುಮಾರಣ್ಣ ಅವರು ಒಬ್ಬ ಮುಖ್ಯಮಂತ್ರಿ ಹೇಗೆ ಆಡಳಿತ ನಡೆಸಬೇಕು ಎಂಬುದನ್ನು ನಾಡಿಗೆ ತೋರಿಸಿಕೊಟ್ಟಿದ್ದಾರೆ. ಹೀಗೆ ಕುಮಾರಣ್ಣ ಅವರು ತಮಗೆ ಸಿಕ್ಕ ಅಧಿಕಾರದ ಅವಧಿಯಲ್ಲಿ ರೈತರಿಗೆ ಅನುಕೂಲವಾಗುವ ಹತ್ತಾರು ಯೋಜನೆಗಳನ್ನು ನೀಡಿ ಮತ್ತು ನಾಡಿನ ಏಳಿಗೆಗೆ ಅಪಾರ ಶ್ರಮಿಸಿದ ಕುಮಾರಣ್ಣ ಅವರಿಗೆ ನಾಡದೇವತೆ ಆಯಸ್ಸು, ಆರೋಗ್ಯ ನೀಡಿ ರಾಜಕೀಯ ರಂಗದಲ್ಲಿ ಮತ್ತಷ್ಟು ಸೇವೆ ನೀಡುವ ಶಕ್ತಿ ತುಂಬಲಿ ಎಂದು ಪ್ರಾರ್ಥನೆ ಸಲ್ಲಿಸಿದರು.
ಅದೇ ರೀತಿ ಮಾಜಿ ಸಚಿವರು ಹಾಗೂ ಇಂದನ ಮತ್ತು ಲೋಕೋಪಯೋಗಿ ಇಲಾಖೆಯ ಅಭಿವೃದ್ಧಿಯ ಹರಿಕಾರರಾದ ಹೆಚ್.ಡಿ.ರೇವಣ್ಣ ಅವರು ರಾಜ್ಯದಲ್ಲಿ ವಿದ್ಯುತ್ ಕ್ರಾಂತಿ ಮಾಡಿ ಇಂದಿಗೂ ವಿದ್ಯುತ್ ಸಮಸ್ಯೆ ಇಲ್ಲದಂತೆ ನೋಡಿಕೊಂಡಿದ್ದಾರೆ. ಹಾಗೆಯೇ ರಸ್ತೆಗಳ ಅಭಿವೃದ್ಧಿಗೆ ಅಪಾರವಾಗಿ ಶ್ರಮಿಸಿದ್ದಾರೆ. ಈ ಇಬ್ಬರು ಜೆಡಿಎಸ್ ನಾಯಕರ ಹುಟ್ಟು ಹಬ್ಬವನ್ನು ಜೆಡಿಎಸ್ ಪಕ್ಷದ ವತಿಯಿಂದ ಸರಳವಾಗಿ ಆಚರಣೆ ಮಾಡಲಾಗಿದೆ. ಕುಮಾರಣ್ಣ ಅವರು 2028ಕ್ಕೆ ಮತ್ತೊಮ್ಮೆ ರಾಜ್ಯದ ಮುಖ್ಯಮಂತ್ರಿಗಳಾಗಲಿ ಎಂದು ಹಾರೈಸಿದರು.

ಈ ಸಂದರ್ಭದಲ್ಲಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಮಂಜುಳಾ, ಡಾ.ಶ್ರೀಕಾಂತ್ , ತಾಲ್ಲೂಕು ಟಿಎಪಿಸಿಎಂಎಸ್ ಸಂಸ್ಥೆಯ ಅಧ್ಯಕ್ಷ ತರ‍್ನೇನಹಳ್ಳಿ ಬಲದೇವ್, ತಾಲ್ಲೂಕು ಟಿಎಪಿಸಿಎಂಎಸ್ ಸಂಸ್ಥೆಯ ನಿರ್ದೇಶಕರಾದ ಹೆಚ್.ಟಿ.ಲೋಕೇಶ್, ಮಲ್ಲೇನಹಳ್ಳಿ ಮೋಹನ್, ನಾಗರಘಟ್ಟ ದಿಲೀಪ್‌ಕುಮಾರ್, ಕುರುಬಹಳ್ಳಿ ನಾಗೇಶ್, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಮೆಣಸ ವಿ.ಎನ್.ಮಹಾದೇವೇಗೌಡ, ತಾಲ್ಲೂಕು ಜೆಡಿಎಸ್ ಕಾನೂನು ಘಟಕದ ಅಧ್ಯಕ್ಷರು ಹಾಗೂ ತಾಲ್ಲೂಕು ವೀರಶೈವ ಲಿಂಗಾಯಿತ ಮಹಾಸಭಾ ಮಾಜಿ ಅಧ್ಯಕ್ಷ ವಿ.ಎಸ್.ಧನಂಜಯ್‌ಕುಮಾರ್, ಎಪಿಎಂಸಿ ಮಾಜಿ ಅಧ್ಯಕ್ಷ ಐನೋರಹಳ್ಳಿ ಮಲ್ಲೇಶ್, ತಾಲ್ಲೂಕು ಯುವ ಜೆಡಿಎಸ್ ಅಧ್ಯಕ್ಷ ವಡ್ಡರಹಳ್ಳಿ ಮಹಾದೇವ್, ಡಿ.ಸಿ.ಸಿ ಬ್ಯಾಂಕ್ ಮಾಜಿ ನಿರ್ದೇಶಕ ತೋಟಪ್ಪಶೆಟ್ಟಿ, ಜೆಡಿಎಸ್ ಮುಖಂಡರಾದ ಬೇಲದಕೆರೆ ನಂಜಪ್ಪ, ಮರೀಗೌಡ, ಕೆ.ಆರ್.ಹೇಮಂತಕುಮಾರ್, ಚಿಕ್ಕೋಸಹಳ್ಳಿ ಸಿ.ಕೆ.ನಾಗೇಶ್, ರಾಯಸಮುದ್ರ ಉಮೇಶ್, ಕುಪ್ಪಳ್ಳಿ ಶೇಷಾದ್ರಿ, ಅಗ್ರಹಾರಬಾಚಹಳ್ಳಿ ಸೊಸೈಟಿ ಅಧ್ಯಕ್ಷ ಅಶೋಕ್, ಭೈರಾಪುರ ಹರೀಶ್, ಗ್ರಾ.ಪಂ.ಮಾಜಿ ಅಧ್ಯಕ್ಷ ರಾಯಸಮುದ್ರ ಯೋಗೇಶ್, ಅಗ್ರಹಾರಬಾಚಳ್ಳಿ ಎ.ಸಿ.ಲೋಹಿತ್, ತಾಲ್ಲೂಕು ಹೆಚ್.ಡಿ.ಕುಮಾರಸ್ವಾಮಿ ಅಭಿಮಾನಿಗಳ ಸಂಘದ ಅಧ್ಯಕ್ಷ ಯಗಚಗುಪ್ಪೆ ಕುಮಾರ್, ಶಾಸಕರ ಆಪ್ತ ಸಹಾಯಕ ಪ್ರತಾಪ್, ಧ್ರುವ. ಮರಡಹಳ್ಳಿ ಪ್ರದೀಪ್, ಕುಮಾರಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.
ಚಿತ್ರಶೀರ್ಷಿಕೆ:16.ಕೆ.ಆರ್.ಪಿ-01: ಕೆ.ಆರ್.ಪೇಟೆ: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮತ್ತು ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರ ಹುಟ್ಟು ಹಬ್ಬದ ಅಂಗವಾಗಿ ತಾಲ್ಲೂಕು ಜೆಡಿಎಸ್ ಕಾರ್ಯಕರ್ತರು ಪಟ್ಟಣದ ಸರ್ಕಾರಿ ಆಸ್ಪತ್ರೆಯ ಎಲ್ಲಾ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡಿ ಬೇಗ ಗುಣಮುಖರಾಗುವಂತೆ ಹಾರೈಸಿದರು.