--ಜಾಹೀರಾತು--

ಮಕ್ಕಳ ವಾಕ್ ಮತ್ತು ಶ್ರವಣ ಸಮಸ್ಯೆ ಪರಿಹರಿಸುವ ಪ್ರಯಾಸ್ ಯೋಜನೆ ರಾಜ್ಯದಲ್ಲೇ ಮಾದರಿ : ಜಿಲ್ಲಾಧಿಕಾರಿ ಶಿಲ್ಪಾ ನಾಗ್

On: December 16, 2025 7:34 PM
Follow us:
--विज्ञापन यहां--

Whatsapp Channel

Join Now

Telegram Group

Join Now
Spread the love

ಮಕ್ಕಳ ವಾಕ್ ಮತ್ತು ಶ್ರವಣ ಸಮಸ್ಯೆ ಪರಿಹರಿಸುವ ಪ್ರಯಾಸ್ ಯೋಜನೆ ರಾಜ್ಯದಲ್ಲೇ ಮಾದರಿ : ಜಿಲ್ಲಾಧಿಕಾರಿ ಶಿಲ್ಪಾ ನಾಗ್

ಚಾಮರಾಜನಗರ:ಮಕ್ಕಳ ವಾಕ್ ಮತ್ತು ಶ್ರವಣ ಸಮಸ್ಯೆಗಳನ್ನು ಗುರುತಿಸಿ ಪರಿಹಾರ ಚಿಕಿತ್ಸೆ ಒದಗಿಸುವ ಸಲುವಾಗಿ ವಿಶೇಷವಾಗಿ ಚಾಮರಾಜನಗರ ಜಿಲ್ಲೆಯಲ್ಲೇ ರೂಪಿತವಾಗಿರುವ ಪ್ರಯಾಸ್ ಕಾರ್ಯಕ್ರಮವು ವಿವಿಧ ಹಂತಗಳಲ್ಲಿ ಪ್ರಗತಿಯಲ್ಲಿದ್ದು, ರಾಜ್ಯಮಟ್ಟದಲ್ಲಿ ಮಾದರಿ ಕಾರ್ಯಕ್ರಮವಾಗಿ ಮೆಚ್ಚುಗೆ ಪಡೆದಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಹೇಳಿದರು.

ಚಾಮರಾಜನಗರ ತಾಲೂಕಿನ ಸಂತೇಮರಹಳ್ಳಿಯ ಸಮುದಾಯ ಆರೋಗ್ಯ ಕೇಂದ್ರದ ಸಭಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಮೈಸೂರಿನ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆ ಸಹಯೋಗದಲ್ಲಿ ಅಂಗನವಾಡಿ ಮಕ್ಕಳ ವಾಕ್ ಮತ್ತ ಶ್ರವಣ ದ್ವಿತೀಯ ಹಂತದ ತಪಾಸಣಾ ಹಾಗೂ ಪ್ರಯಾಸ್ ಕಾರ್ಯಕ್ರಮಕ್ಕೆ ನೆರವು ನೀಡುತ್ತಿರುವ ಸಂಸ್ಥೆಗಳಿಗೆ ಕೃತಜ್ಞತೆ ಗೌರವ ಸಲ್ಲಿಸುವ ಕಾರ್ಯಕ್ರಮ ಉದ್ದೇಶಿಸಿ ಅವರು ಮಾತನಾಡಿದರು.

ಮಾತು ಬಾರದ ಮತ್ತು ಕಿವಿ ಕೇಳದಿರುವ ಸಮಸ್ಯೆಗಳು ತಡವಾಗಿ ಪತ್ತೆಯಾದರೆ ಮಕ್ಕಳ ಶೈಕ್ಷಣಿಕ ಕಾರ್ಯಕ್ಷಮತೆ ಕ್ಷೀಣಿಸುತ್ತದೆ. ಈ ಸಮಸ್ಯೆಗೆ ಆರಂಭದಲ್ಲಿಯೇ ಗುರುತಿಸಿ ಚಿಕಿತ್ಸೆ ನೀಡದೇ ಹೋದರೆ ಮುಂದೆ ಅನೇಕ ಸವಾಲುಗಳು ಎದುರಾಗುತ್ತದೆ. ಈ ಹಿನ್ನೆಲೆಯಲ್ಲಿ ತಪಾಸಣೆ, ವೈದ್ಯಕೀಯ ಚಿಕಿತ್ಸೆ, ಅಗತ್ಯವಿರುವ ಶ್ರವಣ ಸಾಧನಗಳನ್ನು ಒದಗಿಸುವ ಪ್ರಯಾಸ್ ಕಾರ್ಯಕ್ರಮವನ್ನು ಸಂಪೂರ್ಣವಾಗಿ ಸಿಎಸ್‍ಆರ್ ಆರ್ಥಿಕ ನೆರವಿನಿಂದ ಮಾಡಲಾಗುತ್ತಿದೆ ಎಂದರು.

ಜಿಲ್ಲೆಯಲ್ಲಿ 6 ವರ್ಷದೊಳಗಿನ ಎಲ್ಲ ಮಕ್ಕಳಿಗೆ ಆರಂಭದಲ್ಲಿಯೇ ವಾಕ್ ಮತ್ತು ಶ್ರವಣ ತಪಾಸಣೆ ಕೈಗೊಳ್ಳಲಾಗಿದೆ. ಜಿಲ್ಲೆಯ ಅಂಗನವಾಡಿ ವ್ಯಾಪ್ತಿಯಲ್ಲಿ 6 ತಿಂಗಳಿಂದ 6 ವರ್ಷದೊಳಗಿನ 34935 ಮಕ್ಕಳನ್ನು ಗುರುತಿಸಿ ಪ್ರಾಥಮಿಕ ತಪಾಸಣೆಯಿಂದ 11824 ಮಕ್ಕಳನ್ನು ಸಾಂಭವ್ಯ ಮಾತು ಮತ್ತು ಶ್ರವಣ ಸಮಸ್ಯೆ ಇರಬಹುದೆಂದು ಗುರುತಿಸಲಾಗಿದೆ. ದ್ವಿತೀಯ ಹಂತದ ಪರೀಕ್ಷೆ ಗುಂಡ್ಲುಪೇಟೆ ತಾಲೂಕಿನಲ್ಲಿ ನಡೆಸಲಾಗಿದ್ದು, ಚಾಮರಾಜನಗರ ತಾಲೂಕಿನಲ್ಲಿಯೂ ಮುಂದುವರೆದಿದೆ. ಇತರೆ ತಾಲೂಕುಗಳಲ್ಲಿಯೂ ಎರಡನೇ ಹಂತದ ತಪಾಸಣೆ ನಡೆಯಲಿದೆ ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು.

ಚಾಮರಾಜನಗರ ಜಿಲ್ಲೆಯಲ್ಲಿ ಆರಂಭವಾಗಿರುವ ಪ್ರಯಾಸ್ ಕಾರ್ಯಕ್ರಮ ಇತರೆ ಜಿಲ್ಲೆಗಳಿಗೂ ಮಾದರಿ ಯಾಗುವಂತಿದ್ದು, ರಾಜ್ಯಮಟ್ಟದಲ್ಲಿ ಮೆಚ್ಚುಗೆ ಪಡೆದಿದೆ. ಮಕ್ಕಳಿಗಷ್ಟೇ ಅಲ್ಲದೇ ಹಿರಿಯ ನಾಗರಿಕರಿಗೂ ಪ್ರಯಾಸ್ ಕಾರ್ಯಕ್ರಮ ವಿಸ್ತರಿಸಲು ಯೋಜಿಸಲಾಗಿದೆ. ಶ್ರವಣ ಮತ್ತು ಮಾತಿನ ಸಮಸ್ಯೆಗಳನ್ನು ಪರಿಹರಿಸಿ ಶ್ರವಣ ಹಾಗೂ ವಾಕ್ ಸಮಸ್ಯೆ ಮುಕ್ತ ಜಿಲ್ಲೆಯನ್ನಾಗಿಸುವುದು ನಮ್ಮ ಮುಂದಿನ ಗುರಿಯಾಗಿದೆ ಎಂದರು.

ಪ್ರಯಾಸ್ ಕಾರ್ಯಕ್ರಮಕ್ಕೆ ಮೈಸೂರಿನ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಆರೋಗ್ಯ ಇಲಾಖೆ ನೆರವು ನೀಡುತ್ತಿದೆ. ಎಲ್ಲಕ್ಕಿಂತ ಮುಖ್ಯವಾಗಿ ಚಿಕಿತ್ಸೆಗೆ ಹಣಕಾಸಿನ ನೆರವು ನೀಡಲು ರೋಟರಿ ಕ್ಲಬ್ ಆಫ್ ಮೈಸೂರು ವೆಸ್ಟ್ ಸಹಾಯ ಮಾಡುತ್ತಿದೆ. ಆಟೋಮೇಟಿವ್ ಆಕ್ಸಲ್ಸ್ ಸಂಸ್ಥೆ ಸೇರಿದಂತೆ ವಿವಿಧ ಸಂಸ್ಥೆಗಳ ಸಿಎಸ್‍ಆರ್ ನೆರವಿನಿಂದ ಯೋಜನೆ ಕಾರ್ಯರೂಪಕ್ಕೆ ಬಂದಿದೆ. ಈ ಎಲ್ಲರಿಗೂ ಧನ್ಯವಾದಗಳನ್ನು ಅರ್ಪಿಸುವುದಾಗಿ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ತಿಳಿಸಿದರು.

ಮೈಸೂರಿನ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ ಪ್ರಭಾರ ನಿರ್ದೇಶಕರಾದ ಡಾ. ಮಂಜುಳ ಅವರು ಮಾತನಾಡಿ ಜಿಲ್ಲಾಧಿಕಾರಿಯವರಾದ ಶಿಲ್ಪಾ ನಾಗ್ ಅವರ ವಿಶೇಷ ಆಸಕ್ತಿ ಮತ್ತು ಕಾಳಜಿಯಿಂದ ಬಹುಶಃ ದೇಶದಲ್ಲಿಯೇ ಪ್ರಯಾಸ್ ನಂತಹ ಕಾರ್ಯಕ್ರಮ ಅನುಷ್ಠಾನವಾಗುತ್ತಿರುವುದು ಮೊದಲು ಎನಿಸಿದೆ. ಯೋಜನಾ ಬದ್ದವಾಗಿ ಜಿಲ್ಲೆಯಲ್ಲಿ ಮಕ್ಕಳ ಮಾತು ಮತ್ತು ಕಿವಿ ಆರೋಗ್ಯ ಸಮಸ್ಯೆಯನ್ನು ಸಂಪೂರ್ಣವಾಗಿ ಪರಿಹರಿಸುವ ಕಾರ್ಯಕ್ರಮ ಯಸಸ್ವಿಯಾಗಿ ನಡೆಯುತ್ತಿದೆ. ಪೂರ್ವ ಸಿದ್ದತೆಯೊಂದಿಗೆ ಆರಂಭವಾಗಿರುವ ಕಾರ್ಯಕ್ರಮವನ್ನು ಸದುಪಯೋಗ ಮಾಡಿಕೊಳ್ಳಬೇಕೆಂದು ಸಲಹೆ ಮಾಡಿದರು.

ಇದೇ ವೇಳೆ ಪ್ರಯಾಸ್ ಯೋಜನೆಗೆ ನೆರವು ನೀಡುತ್ತಿರುವ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ ವೈದ್ಯರು, ಸಿಎಸ್.ಆರ್ ಅಡಿ ಆರ್ಥಿಕ ಸಹಾಯ ಒದಗಿಸುತ್ತಿರುವ ಸಿಎಸ್‍ಆರ್ ಪ್ರತಿನಿಧಿಗಳಾದ ರೋಟರಿ ಕ್ಲಬ್ ಆಫ್ ಮೈಸೂರು ವೆಸ್ಟ್ ನ ದೇವರಾಜ್, ರುದ್ರೇಶ್, ಷಡಕ್ಷರಸ್ವಾಮಿ, ಕಿರಣ್ ರಾಬರ್ಟ್, ಸ್ಯಾಂ ಚೆರಿಯನ್, ಆಟೋಮೆಟಿಕ್ ಆಕ್ಸೆಲ್ ನ ದಯಾನಂದ್ ಬಿ.ಜಿ, ಇನ್ನಿತರರನ್ನು ಸನ್ಮಾನಿಸಿ ಪ್ರಮಾಣ ಪತ್ರಗಳನ್ನು ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ವಿ. ಚಂದ್ರು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ವಿತರಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್. ಚಿದಂಬರ, ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ ಪ್ರೊ. ಡಾ. ಎಂ. ಸಂದೀಪ್, ಡಾ ಪ್ರೀತ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕರಾದ ಸುರೇಶ್, ಕಾರ್ಯಕ್ರಮ ಸಂಯೋಜಕರಾದ ಶಿವಸ್ವಾಮಿ, ಸಿಎಸ್‍ಆರ್ ಸಮಾಲೋಚಕರದ ರಕ್ಷಿತಾ, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

 

Read this too

*ಜಯಕರ್ನಾಟಕ ಸಂಘಟನೆಯು ಕನ್ನಡ ನಾಡು-ನುಡಿ, ನೆಲ-ಜಲ ಸಂರಕ್ಷಣೆಗೆ ಪ್ರಾಮಾಣಿಕವಾಗಿ ಹೋರಾಟ ಮಾಡುತ್ತಿದೆ* ಜಯಕರ್ನಾಟಕ ಸಂಘಟನೆ ರಾಜ್ಯಾಧ್ಯಕ್ಷ ಜಗದೀಶ್

ಭರವಸೆಯ ನೃತ್ಯಕಲಾವಿದೆ ವಿದಿತಾ ನವೀನ್ ರಂಗಪ್ರವೇಶ

ಗೋಮಾಳ ಒತ್ತುವರಿ ವಿರೋಧಿಸಿ ಗ್ರಾಮಸ್ಥರಿಂದ ಪ್ರತಿಭಟನೆ

ಪಂಚ ಗ್ಯಾರೆಂಟಿ ಯೋಜನೆ ಫಲಾನುಭವಿಗಳ ಕುಂದು ಕೊರತೆ ಸಭೆ ಮಹಿಳಾ ಸಬಲೀಕರಣ ಆರ್ಥಿಕ ಪರಿಸ್ಥಿತಿ ಸುಧಾರಣೆ – ಚಿಕ್ಕ ಹುಲ್ಲೂರು ಬಚ್ಚೇಗೌಡ

*ಭಾರತ ಸರ್ಕಾರದ ಉಕ್ಕು ಮತ್ತು ಭಾರೀ ಕೈಗಾರಿಕಾ ಸಚಿವರು ಹಾಗೂ ಕರ್ನಾಟಕ ಸರ್ಕಾರದ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಮತ್ತು ಮಾಜಿ ಸಚಿವ ಹೆಚ್.ಡಿ.ರೇವಣ್ಣ ಹುಟ್ಟು ಹಬ್ಬದ ಅಂಗವಾಗಿ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಜೆಡಿಎಸ್ ಕಾರ್ಯಕರ್ತರಿಂದ ಹಣ್ಣು ಹಂಪಲು ವಿತರಣೆ*

ಎಚ್ ಡಿ ಕೆ, ಹುಟ್ಟುಹಬ್ಬದ ಪುಟ್ಟಸ್ವಾಮಿರವರಿಂದ ವಿಶೇಷ ಪೂಜೆ