ಕೃಷ್ಣರಾಜಪೇಟೆ ಜೆಡಿಎಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳಿಂದ ಕೇಂದ್ರದ ಉಕ್ಕು ಹಾಗೂ ಭಾರೀ ಕೈಗಾರಿಕೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬ ಆಚರಣೆ. ಮುಗಿಲು ಮುಟ್ಟಿದ ಸಂಭ್ರಮ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ
ಕೃಷ್ಣರಾಜಪೇಟೆ:ಪಟ್ಟಣದಲ್ಲಿ ಜೆಡಿಎಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳಿಂದ ಕೇಂದ್ರದ ಉಕ್ಕು ಹಾಗೂ ಭಾರೀ ಕೈಗಾರಿಕೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬ ಆಚರಣೆ. ಮುಗಿಲು ಮುಟ್ಟಿದ ಸಂಭ್ರಮ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ
_ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳು ಹಾಗೂ ಭಾರತ ಸರ್ಕಾರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರ 66ನೇ ಹುಟ್ಟುಹಬ್ಬದ ಅಂಗವಾಗಿ ಜೆಡಿಎಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಪಟ್ಟಣದ ದುಂಡಶೆಟ್ಟಿ ಲಕ್ಷ್ಮಮ್ಮ ಸ್ಮಾರಕ ಸಾರ್ವಜನಿಕ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲುಗಳನ್ನು ವಿತರಿಸಿ ಕೇಕತ್ತರಿಸಿ ಸಂಭ್ರಮಿಸಿದರು,_
_ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾಗಿ ನೂರಾರು ಜನಪರವಾದ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿ ಮುಖ್ಯಮಂತ್ರಿ ಸ್ಥಾನದ ಘನತೆಗೆ ಗೌರವವನ್ನು ತಂದುಕೊಟ್ಟ ಕೇಂದ್ರದ ಸಚಿವರಾದ ಎಚ್ ಡಿ ಕುಮಾರಸ್ವಾಮಿ ಅವರು ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದರಾಗಿ, ಭಾರೀ ಕೈಗಾರಿಕೆ ಸಚಿವರಾಗಿ ಇಡೀ ದೇಶವೇ ಮೆಚ್ಚುವಂತೆ ದಕ್ಷ ಪ್ರಾಮಾಣಿಕ ಆಡಳಿತ ನೀಡುತ್ತಿದ್ದಾರೆ. ಮಾತೃ ಹೃದಯಿಗಳಾದ ಕುಮಾರಸ್ವಾಮಿಯವರು ನೂರು ಕಾಲ ಆರೋಗ್ಯವಂತರಾಗಿ ನೆಮ್ಮದಿಯ ಜೀವನವನ್ನು ನಡೆಸುವಂತೆ ದಯಾಮಯನಾದ ಭಗವಂತ ಹಾಗೂ ತಾಯಿ ಚೌಡೇಶ್ವರಿ ದೇವಿಯು ಅನುಗ್ರಹಿಸಿ ಆಶೀರ್ವದಿಸಲಿ ಎಂದು ಪ್ರಾರ್ಥಿಸಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲುಗಳನ್ನು ವಿತರಿಸಿ ಶೀಘ್ರವೇ ಗುಣಮುಖ ರಾಗುವಂತೆ ಹಾರೈಸಿದರು.
ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಹೊನ್ನೇನಹಳ್ಳಿ ಮೋಹನ್, ಟಿಎಪಿಸಿಎಂಎಸ್ ಅಧ್ಯಕ್ಷ ಟಿ.ಬಲದೇವ್, ಶಾಸಕರ ಸಹೋದರ ಹೆಚ್.ಟಿ. ಲೋಕೇಶ್, ಎಪಿಎಂಸಿ ಮಾಜಿ ಅಧ್ಯಕ್ಷ ಐನೋರಹಳ್ಳಿ ಮಲ್ಲೇಶ್, ವಳಗೆರೆಮೆಣಸದ ಮಹದೇವೇ ಗೌಡ, ವಿ.ಎಸ್.ಧನಂಜಯ್ ಕುಮಾರ್, ಬೇಲದಕೆರೆ ನಂಜೇಗೌಡ, ತೋಟಪ್ಪಶೆಟ್ಟಿ, ಕೆ.ಆರ್.ಹೇಮಂತಕುಮಾರ್, ವಡ್ಡರಹಳ್ಳಿ ಮಹದೇವೇಗೌಡ, ದೊಡ್ಡಗಾಡಿಗನಹಳ್ಳಿ ಕುಮಾರ್, ವಕೀಲ ಕುರುಬಹಳ್ಳಿ ನಾಗೇಶ್, ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಮಂಜುಳಾ ಸೇರಿದಂತೆ ನೂರಾರು ಅಭಿಮಾನಿಗಳು ಹಾಗೂ ಪಕ್ಷದ ಕಾರ್ಯಕರ್ತರು ಮುಖಂಡರು ಹುಟ್ಟು ಹಬ್ಬದ ಸಂಭ್ರಮದಲ್ಲಿ ಭಾಗಿಯಾಗಿ ಕೇಕ್ ಕತ್ತರಿಸಿ ಸಂಭ್ರಮಿಸಿದರು._
*_ವರದಿ: ಸಾಯಿಕುಮಾರ್. ಎನ್. ಕೆ_*





